ಮಂಗಳೂರು: ಶನಿವಾರ ಮುಂಜಾನೆ ಹೊಂಡಾ ಆಕ್ಟಿವಾವೊಂದಕ್ಕೆ ಲಾರಿಯೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಸವಾರ ದುರಂತ ಸಾವನ್ನಪ್ಪಿದ ಘಟನೆ ಕೊಲ್ಯದಲ್ಲಿ ನಡೆದಿದೆ. ಮೃತರನ್ನು ಜಯಪ್ರಕಾಶ್(54) ಎಂದು ಗುರುತಿಸಲಾಗಿದೆ.
ತೊಕ್ಕೊಟ್ಟಿನಿಂದ ಮಾಡೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದು ಲಾರಿಯಡಿಗೆ ಬಿದ್ದ ಜಯಪ್ರಕಾಶ್ ಸಾವನ್ನಪ್ಪಿದ್ದಾರೆ. ಮಗಳನ್ನು ಶಾಲೆಗೆ ಬಿಟ್ಟು ವಾಪಾಸ್ ತೆರಳುತ್ತಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. ಇವರು ಜಾಗದ ವ್ಯವಹಾರ ಮಾಡಿಕೊಂಡಿದ್ದರು ಎನ್ನಲಾಗಿದೆ. ಟ್ರಾಫಿಕ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


