ಬಂಟ್ವಾಳ : ಪಾಣೆ ಮಂಗಳೂರು ಬ್ಲಾಕ್ ಸಮಿತಿ ಅಧ್ಯಕ್ಷರಾಗಿ ಸುದೀಪ್ ಕುಮಾರ್ ಶೆಟ್ಟಿ ಮಾಣಿ ಮತ್ತು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ಗೆ ಬೇಬಿ ಕುಂದರ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಮಾಜಿ ಸಚಿವ ಬಿ.ರಮಾನಾಥ ರೈ ಮತ್ತು ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ಶಿಫಾರಸಿನಂತೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡುರಾವ್ ಆಯ್ಕೆಗೊಳಿಸಿ ಆದೇಶ ನೀಡಿದ್ದಾರೆ. ಮಾಜಿ ಸಚಿವ ಬಿ.ರಮಾನಾಥ ರೈ ಆಯ್ಕೆ ಆದೇಶ ಪತ್ರ ವನ್ನು ನೂತನ ಅಧ್ಯಕ್ಷರುಗಳಿಗೆ ಹಸ್ತಾಂತರಿಸಿ ಶುಭ ಹಾರೈಸಿದರು.

