ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿರುವ ರಮೇಶ್ ಕೆ. ಪುಣಚ (ವಿಷ್ಣುಗುಪ್ತ) ಅವರ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಪೊಲೀಸ್ ಸಹಾಯಕ ವರಿಷ್ಠಾಧಿಕಾರಿಯನ್ನು ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಒತ್ತಾಯಿಸಿದೆ.
ಬುಧವಾರ ಬಂಟ್ವಾಳ ಎಎಸ್ಪಿ ಹೃಷಿಕೇಶ್ ಅವರಿಗೆ ಸಂಘದ ಪದಾಧಿಕಾರಿಗಳು ಮನವಿ ಸಲ್ಲಿಸಿದ್ದಾರೆ. ಆರೋಪಿಗಳನ್ನು ಬಂಧಿಸಿ ,ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಲಾಗಿದ್ದು, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವೀಕಾಂತೇ ಗೌಡ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿ ಒತ್ತಡಹೇರಲು ಸಂಘದ ತುರ್ತುಸಭೆಯಲ್ಲಿ ನಿರ್ಧರಿಸಲಾಯಿತು.ನಿಯೋಗದಲ್ಲಿ ಸಂಘದ ಅಧ್ಯಕ್ಷ ಹರೀಶ ಮಾಂಬಾಡಿ, ಪ್ರಧಾನ ಕಾರ್ಯದರ್ಶಿ ಮಹಮದ್ ಆಲಿ ವಿಟ್ಲ, ಜತೆ ಕಾರ್ಯದರ್ಶಿ ಅಬ್ದುಲ್ ರಹಿಮಾನ್, ಸದಸ್ಯರಾದ ವೆಂಕಟೇಶ್ ಬಂಟ್ವಾಳ,ಮೌನೇಶ್ ವಿಶ್ವಕರ್ಮ, ರತ್ನದೇವ್ ಪುಂಜಾಲಕಟ್ಟೆ, ಸಂದೀಪ್ ಸಾಲ್ಯಾನ್,ಕಿಶೋರ್ ಪೆರಾಜೆ,ಹಮೀದ್ ವಿಟ್ಲ ಉಪಸ್ಥಿತರಿದ್ದರು.
