ಬಂಟ್ವಾಳ: ವಿಟ್ಲ, ಬೊಬ್ಬಕ್ಕೇರಿ ನಿವಾಸಿ, ಪತ್ರಕರ್ತ ವಿಷ್ಣು ಗುಪ್ತ ಪುಣಚ ಅವರ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಕರ್ನಾಟಕ ಪತ್ರಕರ್ತರ ಸಂಘ ಬಂಟ್ವಾಳ ತಾಲೂಕು ಸಮಿತಿ ವತಿಯಿಂದ ಬಂಟ್ವಾಳ ಎಎಸ್ಪಿ ಸೋನಾವಣೆ ಖುಷಿಕೇಸಿ ಭಗವಾನ್ ಅವರಿಗೆ ಕಚೇರಿಯಲ್ಲಿ ಬುಧವಾರ ಮನವಿ ಸಲ್ಲಿಸಲಾಯಿತು.

btl robbery
ಕಳ್ಳತನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ನೈಜ ಆರೋಪಿ ಗಳನ್ನು ಶೀಘ್ರವಾಗಿ ಬಂಧಿಸಬೇಕು ಎಂದು ಸಂಘದ ಸದಸ್ಯರು ಆಗ್ರಹಿಸಿದರು.
ಬಳಿಕ ಬಂಟ್ವಾಳ ವೃತ್ತ ನಿರೀಕ್ಷಕರು ಟಿ.ಡಿ.ನಾಗರಾಜ್ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಫಾರೂಕ್ ಬಂಟ್ವಾಳ, ಕಾರ್ಯದರ್ಶಿ ವಿ.ಟಿ.ಪ್ರಸಾದ್, ಉಪಾಧ್ಯಕ್ಷ ಪಿ.ಎಂ. ಅಶ್ರಫ್, ಕೋಶಾಧಿಕಾರಿ ವಿಶ್ವನಾಥ್ ಬಂಟ್ವಾಳ, ಸದಸ್ಯರಾದ ಲತೀಫ್ ನೇರಳಕಟ್ಟೆ, ಜ್ಯೋತಿ ಪ್ರಕಾಶ್ ಪುಣಚ, ಸತೀಶ್ ಕಾರ್ತಿಕ್ ಉಪಸ್ಥಿತರಿದ್ದರು

By suddi9

Leave a Reply

Your email address will not be published. Required fields are marked *