ವಿಟ್ಲ: ಇಲ್ಲಿನ ಪೆಟ್ರೋಲಿಯಂ ಕನ್ಸರ್ವೇಶನ್ ರೀಸರ್ಚ್ ಅಸೋಸಿಯೇಶನ್ ಮತ್ತು ಸಾಯಿಗಣೇಶ್ ಇಂಡೇನ್ ಗ್ಯಾಸ್ ಏಜೆನ್ಸಿ ಇದರ ವತಿಯಿಂದ ಉತ್ತಮ ಪರಿಸರಕ್ಕಾಗಿ ಇಂದನ ಉಳಿಸಿ’ ಕಾರ್ಯಕ್ರಮದಡಿಯಲ್ಲಿ ವಿಠಲ ಪ್ರೌಢ ಶಾಲೆಯಲ್ಲಿ ಪಿಯುಸಿ ಮತ್ತು ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ ಏರ್ಪಡಿಸಲಾಗಿತ್ತು.

ರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ಈ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ವಿಠಲ ಪದವಿ ಪೂರ್ವ ಕಾಲೇಜಿನ ತಂಝೀಮ್ ಹಾಗೂ ದ್ವಿತೀಯ ಸ್ಥಾನಗಳನ್ನು ವಿಠಲ ಪದವಿ ಪೂರ್ವ ಕಾಲೇಜಿನ ಜಯಲಕ್ಷ್ಮಿ ಮತ್ತು ವಿಠಲ ಪ್ರೌಢ ಶಾಲೆಯ ಲಿಖಿತಾ ಇವರು ಪಡೆದರು. ಸ್ಪರ್ಧೆಯಲ್ಲಿ ಅಧ್ಯಕ್ಷತೆಯನ್ನು ವಹಿಸಿದ್ದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ವಿಟ್ಲ ಇಂಡೇನ್ ಗ್ಯಾಸ್ ಏಜೆನ್ಸಿ ಮಾಲಕ ಸತೀಶ್ ವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡಲಾಯಿತು.
ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ವಿಟ್ಲ ಲಯನ್ಸ್ ಕ್ಲಬ್ ಅಧ್ಯಕ್ಷೆ ಜಯಾ ಕುಮಾರ್ ಆಳ್ವ ಇವರು ಭಾಗವಹಿಸಿದ್ದರು.
ವಿಠಲ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಬ್ರಹ್ಮಾವರ್ ಸ್ವಾಗತಿಸಿದರು. ಹಿರಿಯ ಶಿಕ್ಷಕ ಸುಬ್ರಹ್ಮಣ್ಯ ಭಟ್ ಸಿ ಹೆಚ್ ವಂದಿಸಿ ಕಾರ್ಯಕ್ರಮ ನಿರೂಪಿಸಿದರು. ಚಿತ್ರಕಲಾ ಶಿಕ್ಷಕ ಉದಯ್ ವಿಟ್ಲ ಸಹಕರಿಸಿದರು.

