ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ `ರೋಸ್ಟ್ರಮ್- ಸ್ಪೀಕರ್ಸ್ ಕ್ಲಬ್’ ವಿದ್ಯಾರ್ಥಿ ವೇದಿಕೆಯು ಅತಿಥಿ ಉಪನ್ಯಾಸವನ್ನು ಆಯೋಜಿಸಿದ್ದು, ಸಂಪನ್ಮೂಲ ವ್ಯಕ್ತಿಯಾಗಿ ಅಂತರಾಷ್ಟ್ರೀಯ ಖ್ಯಾತಿಯ ಜೀವನಕೌಶಲ್ಯ ಗುರುಗೌರ್ ಗೋಪಾಲ್ ದಾಸ್ ಭಾಗವಹಿಸುತ್ತಿದ್ದಾರೆ.
ಕಾರ್ಯಕ್ರಮವು ಅ.27ರಂದು ಆಳ್ವಾಸ್ ಕಾಲೇಜಿನ ವಿದ್ಯಾಗಿರಿ ಆವರಣದಲ್ಲಿರುವ ನುಡಿಸಿರಿ ವೇದಿಕೆಯಲ್ಲಿ ಮಧ್ಯಾಹ್ನ 2 ಗಂಟೆಯಿಂದ ನಡೆಯಲಿದೆ. ಇದೇ ಮೊದಲ ಬಾರಿಗೆ ಗೌರ್ಗೋಪಾಲ್ದಾಸ್ ಮಂಗಳೂರಿಗೆ ಆಗಮಿಸುತ್ತಿದ್ದು, ಕಾರ್ಯಕ್ರಮಕ್ಕಾಗಿ ಪಾಸ್ಗಳನ್ನು ನೀಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ 9731952512, 9148731537, 9591302315

