ಮೂಡುಬಿದಿರೆ: ಮೂಡುಬಿದಿರೆ ಪರಿಸರದಲ್ಲಿ ಹೆಚ್1 ಎನ್1 ರೋಗ ಲಕ್ಷಣಗಳು ಕಂಡು ಬಂದ ಹಿನ್ನಲೆಯಲ್ಲಿ ಮೂಡುಬಿದಿರೆ ರೋಟರಿ ಕ್ಲಬ್ ಟೆಂಪಲ್‍ಟೌನ್ ಹಾಗೂ ಸಮುದಾಯ ಆರೋಗ್ಯ ಕೇಂದ್ರದ ವತಿಯಿಂದ ಜನಜಾಗೃತಿ ಕಾರ್ಯಕ್ರಮ ಶುಕ್ರವಾರ ನಡೆಸಲಾಯಿತು.

jaagruthi

ಮೂಡುಬಿದಿರೆ ರೋಟರಿ ಕ್ಲಬ್ ಟೆಂಪಲ್‍ಟೌನ್ ಅಧ್ಯಕ್ಷ ವಿನ್ಸೆಂಟ್ ಡಿಕೋಸ್ತ, ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶಶಿಕಲಾ ಪ್ರಚಾರ ವಾಹನಕ್ಕೆ ಹಸಿರು ನಿಶಾನೆ ತೋರಿದರು.
ಈ ಸಂದರ್ಭದಲ್ಲಿ ಹಿರಿಯ ಆರೋಗ್ಯ ನಿರೀಕ್ಷಕ ಉದಯ ಕುಮಾರ್, ರೋಟರಿ ಕ್ಲಬ್ ಮಾಜಿ ಅಧ್ಯಕ್ಷರಾದ ರಾಜೇಶ್ ಬಂಗೇರ, ಉಮೇಶ್ ರಾವ್, ಮಾಜಿ ಕಾರ್ಯದರ್ಶಿ ಅಜಯ್ ಗ್ಲೆನ್ ಡಿಸೋಜ, ಸದಸ್ಯರಾದ ಹರೀಶ್ ಕಾಪಿಕಾಡ್, ರಾಜೇಶ್, ಫಾರೂಕ್ ಉಪಸ್ಥಿತರಿದ್ದರು.
ಮೂಡುಬಿದಿರೆ ಪರಿಸರದಲ್ಲಿ ನಾಲ್ಕು ದಿನಗಳ ಕಾಲ ಪ್ರಚಾರ ಜನಜಾಗೃತಿ ಕಾರ್ಯಕ್ರಮ ನಡೆಯಲಿದೆ.

By Suddi9

Leave a Reply

Your email address will not be published. Required fields are marked *