ವಿಟ್ಲ: ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ವಿಠಲ ಪದವಿ ಪೂರ್ವ ಕಾಲೇಜು ವಿಟ್ಲ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಪದವಿ ಪೂರ್ವ ಕಾಲೇಜು ಬಾಲಕ ಬಾಲಕಿಯರ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟಗಳ ಉದ್ಘಾಟನಾ ಸಮಾರಂಭದಲ್ಲಿ, ವಿಠಲ ಪ್ರೌಢ ಶಾಲಾ ದೈಹಿಕ ಶಿಕ್ಷಕಿ ಮಲ್ಲಿಕಾ ಹೆಗ್ಡೆ ಮತ್ತು ಮಾಣಿ ಕರ್ನಾಟಕ ಪ್ರೌಢ ಶಾಲೆಯ ದೈಹಿಕ ಶಿಕ್ಷಕ ಗಂಗಾಧರ ರೈ ಇವರನ್ನು ವಿಟ್ಲ ಪಟ್ಟಣ ಪಂಚಾಯತ್ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ರಾಮದಾಸ ಶೆಣೈ ಸನ್ಮಾನಿಸಿದರು.

sanmana
ಈ ಸಂದರ್ಭದಲ್ಲಿ ವಿಠಲ ವಿದ್ಯಾ ಸಂಘದ ಅಧ್ಯಕ್ಷ ಮುಗುಳಿ ತಿರುಮಲೇಶ್ವರ ಭಟ್, ದ ಕ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಕ್ರೀಡಾ ಸಂಯೋಜಕ ಪ್ರೇಮನಾಥ ಶೆಟ್ಟಿ, ವಿಠಲ ವಿದ್ಯಾ ಸಂಘದ ಕಾರ್ಯದರ್ಶಿ ಯಶವಂತ ವಿಟ್ಲ, ಕೋಶಾಧಿಕಾರಿ ನಿತ್ಯಾನಂದ ನಾಯಕ್, ಸದಸ್ಯ ಪದ್ಮಯ್ಯ ಗೌಡ ಮತ್ತು ವಿಠಲ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಬ್ರಹ್ಮಾವರ್ ಇವರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ವಿಠಲ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಆದರ್ಶ ಚೊಕ್ಕಾಡಿ ಸ್ವಾಗತಿಸಿದರು. ಪ್ರಕಾಶ್ ನಾಯಕ್ ಮತ್ತು ವಿಶ್ವಕುಮಾರಿ ಪಿ ಎನ್ ಸನ್ಮಾನ ಪತ್ರ ವಾಚಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಸುಚೇತನ್ ಜೈನ್ ವಂದಿಸಿದರು. ಅಣ್ಣಪ್ಪ ಸಾಸ್ತಾನ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *