ಮೂಡುಬಿದಿರೆ: ಭಂಡಾರಿ ಸಮಾಜ ಸೇವಾ ಸಂಘದ ಮಹಾಸಭೆ ರವಿವಾರ ಸಮಾಜ ಮಂದಿರ ಆವರಣದ ಸ್ವರ್ಣ ಮಂದಿರದಲ್ಲಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.
ಸಂಘದ ಅಧ್ಯಕ್ಷ ಕೆ.ಎನ್. ಪ್ರಕಾಶ್ ಕಾರ್ಯಕ್ರಮದ ಅಧ್ಯಕ್ಷತೆಯಲ್ಲಿ ವಹಿಸಿದ್ದರು.

ಮಹಾಸಭೆಯಲ್ಲಿ ಕಳೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ದಾಖಲಿಸಿದ ಭಂಡಾರಿ ಸಮಾಜದ ರೋಶ್ನಿ ಭಂಡಾರಿ, ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ದಾಖಲಿಸಿದ ವರುಣ್ ವೈ ಭಂಡಾರಿ ಅವರನ್ನು ಸಮ್ಮಾನಿಸಲಾಯಿತು. ಭಂಡಾರಿ ಸಮಾಜದ 42 ಅರ್ಹ ವಿದ್ಯಾರ್ಥಿಗಳಿಗೆ 1 ಲಕ್ಷ ರೂಪಾಯಿಗಳಿಗೂ ಮಿಕ್ಕಿದ ವಿದ್ಯಾರ್ಥಿ ವೇತನ, ಸಹಾಯಧನ ವಿತರಣೆ ನಡೆಯಿತು.
ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ ಶಾಂತ ಕೆ.ಭಂಡಾರಿ, ಸುಮಿತ್ರ ಕೃಷ್ಣ ಭಂಡಾರಿ,ಪುರಸಭಾ ಸದಸ್ಯ ಪ್ರಸಾದ್ ಭಂಡಾರಿ, ಕೋಶಾಧಿಕಾರಿ ಗುರುಪ್ರಸಾದ್ ಭಂಡಾರಿ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಉಪಾಧ್ಯಕ್ಷ ಯೋಗೇಶ್ ಭಂಡಾರಿ ಸ್ವಾಗತಿಸಿ, ಸತೀಶ್ ಭಂಡಾರಿ ಬಸವನಕಜೆ ವಂದಿಸಿದರು. ಪ್ರಧಾನ ಕಾರ್ಯದರ್ಶಿ ಸತೀಶ್ ಭಂಡಾರಿ ಕರಿಂಜೆ ಕಾರ್ಯಕ್ರಮ ನಿರೂಪಿಸಿದರು.
