ಬಂಟ್ವಾಳ:ತಾಲ್ಲೂಕಿನ ಮೆಲ್ಕಾರ್ ಸಮೀಪದ ಬೋಳಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ಯಾಂಕರ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಮಂಗಳವಾರ ನಡೆದಿದೆ. ಮೃತರನ್ನು ಕೆಲಿಂಜ ನಿವಾಸಿ ಇಸ್ಮಾಯಿಲ್ ಎಂಬವರ ಪುತ್ರ ಹಸನ್ ಸಾಯಿಕ್(28) ಎಂದು ಗುರುತಿಸಲಾಗಿದೆ.

ಇವರು ಮೂಡುಬಿದ್ರೆ ಬುರ್ಕಾ ಅಂಗಡಿಯಲ್ಲಿ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಟ್ಯಾಂಕರ್ ಡಿಕ್ಕಿ ಹೊಡೆದು ಪರಾರಿಯಾಗಿತ್ತು. ತಕ್ಷಣವೇ ಸ್ಥಳೀಯರು ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಅವರು ದಾರಿ ಮಧ್ಯೆ ಸಾವನ್ನಪ್ಪಿದ್ದು, ಪುತ್ತೂರು ಸಮೀಪದ ಮಿತ್ತೂರು ಎಂಬಲ್ಲಿ ಟ್ಯಾಂಕರನ್ನು ಇಲ್ಲಿನ ಸಂಚಾರಿ ಠಾಣೆ ಪೊಲೀಸರು ವಶಪಡಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *