ಬಂಟ್ವಾಳ : ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಬಂಟ್ವಾಳ ತಾಲೂಕು ನಿರತ ಸಾಹಿತ್ಯ ಸಂಪದ, ಕಡೆಗೋಳಿ ತುಂಬೆ ಇವರು ಕಥಾ ಸ್ಪರ್ಧೆ ನಡೆಸಿದರು.
ದ್ವಿತೀಯ ವಾಣಿಜ್ಯ ವಿಭಾಗದ ಕೆ. ಧೀರೇಶ್ ಕುಮಾರ್ ಪ್ರಥಮ ಮತ್ತು ಪ್ರಥಮ ವಿಜ್ಞಾನ ವಿಭಾಗದ ವೈಶಾಖ್ ಇವರು ಹಾಸ್ಯಬರಹದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.

ಇವರಿಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ-ಉಪನ್ಯಾಸಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.
