ಮೂಡುಬಿದಿರೆ: ಕನ್ನಡಿಗರಿಗೆ ಕನ್ನಡ ಭಾಷೆ ಮತ್ತು ನಿತ್ಯವೂ ಕನ್ನಡತನವೇ ಸ್ವಾಭಿಮಾನವಾಗಲಿ. ಕನ್ನಡದ ಬೆಳವಣಿಗೆಗೆ ನಾವೆಲ್ಲರೂ ನಮ್ಮಿಂದಾದ ಸೇವೆ ಸಲ್ಲಿಸೋಣ ಎಂದು ಮೂಡುಬಿದಿರೆ ಜೈನ ಪ್ರೌಢಶಾಲೆಯಯ ಮುಖ್ಯ ಶಿಕ್ಷಕ ಮುನಿರಾಜ ರೆಂಜಾಳ ಹೇಳಿದರು.
ಮೂಡುಬಿದಿರೆ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕನ್ನಡರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

Exellent Kannada Rajyostava
ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ ಜೈನ್ ಅಧ್ಯಕ್ಷತೆ ವಹಿಸಿ ಶುಭಾಶಂಸನೆಗೈದರು.
ಈ ಸಂದರ್ಭದಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ, ಫ್ರೌಢಶಾಲಾ ಮುಖ್ಯ ಶಿಕ್ಷಕ ಗುರುಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕನ್ನಡ ಉಪನ್ಯಾಸಕ ರಾಮಕೃಷ್ಣ ಹೆಗಡೆ ನಿರೂಪಿಸಿ ವಂದಿಸಿದರು.

By suddi9

Leave a Reply

Your email address will not be published. Required fields are marked *