ಮೂಡುಬಿದಿರೆ: ಇಲ್ಲಿನ ರೋಟರಿ ವಿದ್ಯಾಸಂಸ್ಥೆಯಲ್ಲಿ 63ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಬೇಲಾಡಿ ವಿಠಲ ಶೆಟ್ಟಿ ಭುವನೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕಳೆದ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ, ಸಿಬಿಎಸ್‍ಇ(10)ಪರೀಕ್ಷೆಯಲ್ಲಿ ಕನ್ನಡ ಭಾಷಾ ವಿಷಯದಲ್ಲಿ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸ್ಮರಣಿಕೆ ನೀಡುವುದರ ಮೂಲಕ ಗೌರವಿಸಲಾಯಿತು.
ಸಂಸ್ಥೆಯ ಪ್ರಾಂಶುಪಾಲ ವಿನ್ಸೆಂಟ್ ಡಿ’ಕೋಸ್ತ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಕನ್ನಡ ಸಾಹಿತ್ಯದ ಬಗ್ಗೆ ವಿದ್ಯಾರ್ಥಿನಿ ಹರ್ಷಿತಾ ಮಾತನಾಡಿದರು. ಕನ್ನಡದ ಮೊದಲುಗಳ ಬಗ್ಗೆ ದುರ್ಗಾಶ್ರೀ ಮಾಹಿತಿ ನೀಡಿದರು.
ಕಾರ್ಯಕ್ರಮವನ್ನು ಪ್ರತೀಕ್ಷಾ ಸ್ವಾಗತಿಸಿದರು. ಪ್ರದ್ಯುಮ್ನ ಮೂರ್ತಿ ಕಾರ್ಯಕ್ರಮ ನಿರೂಪಿಸಿದರು. ಅನುಷಾ ವಂದಿಸಿದರು.
