ಮೂಡುಬಿದಿರೆ: ಶ್ರೀ ಮಹಾವೀರ ಪದವಿಪೂರ್ವ ಕಾಲೇಜಿನ ರೋವರ್ಸ್, ರೇಂಜರ್ಸ್ ಮತ್ತು ಎನ್‍ಎಸ್‍ಎಸ್ ಘಟಕಗಳ ಆಶ್ರಯದಲ್ಲಿ ರಾಷ್ಟ್ರೀಯ ಏಕತಾ ದಿನವನ್ನು ಆಚರಿಸಲಾಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಆಳ್ವಾಸ್ ಕಾಲೇಜಿನ ಸಂಸ್ಕೃತ ಉಪನ್ಯಾಸಕ ಶ್ರೀನಿಧಿ, ಸರ್ದಾರ್ ವಲ್ಲಭಬಾಯಿ ಪಟೇಲರವರ ಬದುಕು ಮತ್ತು ಚಿಂತನೆಗಳ ಬಗ್ಗೆ ವಿಸ್ತಾರವಾಗಿ ಮಾತನಾಡಿದರು.

ಶ್ರೀಮಹಾವೀರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೋ. ರಮೇಶ್ ಭಟ್ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದರು.
ಈ ಸಂದರ್ಭದಲ್ಲಿ ರೇಂಜರ್ಸ್ ಘಟಕದ ಅಧಿಕಾರಿ ಯಶೋದಾ ಮತ್ತು ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಪ್ರಮೀಳಾ ಚೊಕ್ಕಾಡಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸುರಕ್ಷಾ ಸ್ವಾಗತಿಸಿದರು. ಸೊನಾಲಿ ಅತಿಥಿ ಪರಿಚಯ ಮಾಡಿದರು. ದಿವ್ಯಾ ಕಾರ್ಯಕ್ರಮ ನಿರೂಪಿಸಿದರು. ದಯೇಶ ವಂದಿಸಿದರು.
