ಗುರುಪುರ : ಜೀರ್ಣೋದ್ಧಾರ ಹಂತದಲ್ಲಿರುವ ಗುರುಪುರ ಮೂಳೂರು ಶ್ರೀ ಮುಂಡಿತ್ತಾಯ(ವೈದ್ಯನಾಥ) ದೈವಸ್ಥಾನದ ಜೀರ್ಣೋದ್ಧಾರ ಕೆಲಸಗಳಿಗೆ ನೆರವಾಗಲೆಂದು ಗುರುಪುರ ವ್ಯವಸಾಯ ಸೇವಾ ಸಹಕಾರಿ ಸಂಘ ದೇಣಿಗೆ ನೀಡಿತು.
ಸಂಘದ ಕಚೇರಿಯಲ್ಲಿ ಬುಧವಾರ ನಡೆದ ಸರಳ ಸಮಾರಂಭದಲ್ಲಿ ದೈವಸ್ಥಾನದ ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿ ಪುರುಷೋತ್ತಮ ಮಲ್ಲಿಯವರಿಗೆ ಸಂಘದ ಅಧ್ಯಕ್ಷ ವಿನಯ ಕುಮಾರ್ ಶೆಟ್ಟಿ ಚೆಕ್ ವಿತರಿಸಿದರು. ಈ ಸಂದರ್ಭದಲ್ಲಿ ಸಂಘದ(ಬ್ಯಾಂಕ್) ಕಾರ್ಯನಿರ್ವಹಣಾಧಿಕಾರಿ(ಸಿಇಒ) ನಾಗರಾಜ ರಾವ್, ನಿರ್ದೇಶಕರಾದ ನಾಗೇಶ್ ಕಾಪೆಟ್ಟು, ಸದಾಶಿವ ಶೆಟ್ಟಿ ಕೆ. ಇದ್ದರು.
