ಬಂಟ್ವಾಳ: 2018ನೇ ಸಾಲಿನ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲೇ ಪ್ರಥಮ ಬಾರಿಗೆ ಉತ್ತೀರ್ಣರಾದ ಪರಿಶಿಷ್ಠ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ಸಿಬಿಎಸ್‍ಸಿ ಹಾಗೂ ಐಸಿಎಸ್‍ಇ ರವರು ನಡೆಸುವ 2018ನೇ ಸಾಲಿನ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲೇ ಪ್ರಥಮ ಬಾರಿಗೆ ಶೇ.60ರಿಂದ ಶೇ, 74.99 ಹಾಗೂ ಶೇ. 75ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಕ್ರಮವಾಗಿ ತಲಾ 7 ಸಾವಿರ ಮತ್ತು 15 ಸಾವಿರ ಪ್ರೋತ್ಸಾಹಧನ ಮಂಜೂರು ಮಾಡಲು ಅವಕಾಶವಿರುತ್ತದೆ. ಅದರಂತೆ ಅರ್ಹ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಇಲಾಖೆಯ ವೆಬ್‍ಸೈಟ್ ವಿಳಾಸ ತಿತಿತಿ.sತಿ.ಞಚಿಡಿ.ಟಿiಛಿ.iಟಿ ಇಲ್ಲಿ ಅರ್ಹ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ಆನ್‍ಲೈನ್ ಅರ್ಜಿಯೊಂದಿಗೆ ಪೂರಕ ದಾಖಲೆಗಳನ್ನು ಸಹಾಯಕ ನಿರ್ದೇಶಕರು (ಗ್ರೇಡ್-2) ತವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಬಂಟ್ವಾಳ ಇವರಿಗೆ ಸಲ್ಲಿಸಬೇಕು ಸಲ್ಲಿಸಲು ಕೊನೆಯ ದಿನಾಂಕ ಡಿ.15 ಎಂದು ಸಮಾಜಕಲ್ಯಾಣ ಇಲಾಖೆಯ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *