ಬಂಟ್ವಾಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಂಟ್ವಾಳ, ಅಮ್ಟಾಡಿ ಗ್ರಾಮಪಂಚಾಯತ್ ಹಾಗೂ ಬಂಟ್ವಾಳ ರೋಟರಿಕ್ಲಬ್ ಇದರ ಆಶ್ರಯದಲ್ಲಿ ಪಂಜಿಕಲ್ಲು ವಲಯ ಮಟ್ಟದ ಮಕ್ಕಳ ದಿನಾಚರಣೆಯು ಬಿ.ಸಿ.ರೋಡಿನ ರೋಟರಿ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು. ರೋಟರಿ ಕ್ಲಬ್ ಬಂಟ್ವಾಳ ನಿರ್ದೇಶಕಿ ಪ್ರತಿಭಾ ರೈ ಕಾರ್ಯಕ್ರಮ ಉದ್ಘಾಟಿಸಿದರು.

ರೋಟರಿಕ್ಲಬ್ ಅಧ್ಯಕ್ಷ ಮಂಜುನಾಥ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಹಿರಿಯ ರಂಗಕರ್ಮಿ ಐಕೆ ಬೊಳುವಾರು, ಪತ್ರಕರ್ತ ಮೌನೇಶ ವಿಶ್ವಕರ್ಮ, ರೋಟರಿ ಆ್ಯನ್ಸ್ ಅಧ್ಯಕ್ಷೆ ವಿದ್ಯಾ ಎ.ರೈ, ಮೇಘಾ ಆಚಾರ್ಯ, ಇಲಾಖಾ ಮೇಲ್ವಿಚಾರಕಿ ಭಾರತಿ ಕುಂದರ್ ವೇದಿಕೆಯಲ್ಲಿದ್ದರು.ಮೇಲ್ವಿಚಾರಕಿ ಗಾಯತ್ರಿ ಕಂಬಳಿ ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.ಪ್ಲೇವಿ ವಂದಿಸಿದರು. ಭವ್ಯ ಕಾರ್ಯಕ್ರಮ ನಿರ್ವಹಿಸಿದರು.
ವಿವಿಧ ಚಟುವಟಿಕೆಗಳನ್ನು ಏರ್ಪಡಿಸಿ, ಬಹುಮಾನ ವಿತರಿಸಲಾಯಿತು.
