ಬಂಟ್ವಾಳ: ವಿಶ್ವ ಶೌಚಾಲಯ ದಿನಾಚರಣೆಯ ಕಾರ್ಯಕ್ರಮವು ಬಂಟ್ವಾಳ ತಾಲೂಕು ಪಂಚಾಯತ್ ಆಶ್ರಯದಲ್ಲಿ ನ..19 ರಂದು ಸೋಮವಾರ ಬಿ.ಸಿ.ರೋಡ್ ನ ಜೋಡುಮಾರ್ಗದ ಸಮೀಪದಲ್ಲಿರುವ ಸ್ಪರ್ಶ ಕಲಾ ಮಂದಿರದಲ್ಲಿ ಪೂರ್ವಾಹ್ನ 10.00 ಗಂಟೆಗೆ ಸರಿಯಾಗಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕ, ಮಾನ್ಯ ಅಧ್ಯಕ್ಷರು , ಉಪಾಧ್ಯಕ್ಷರು , ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷರು ತಾಲೂಕು ಪಂಚಾಯತ್ ಬಂಟ್ವಾಳ , ಮಾನ್ಯ ಜಿಲ್ಲಾ ಪಂಚಾಯತ್ ಸದಸ್ಯರು ಹಾಗೂ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಭಾಗವಹಿಸಲಿರುವರು.ೆಂದು ಪ್ರಕಟನೆ ತಿಳಿಸಿದೆ.

By suddi9

Leave a Reply

Your email address will not be published. Required fields are marked *