ಮೂಡುಬಿದಿರೆ: ಪದವಿಪೂರ್ವ ಶಿಕ್ಷಣ ಇಲಾಖೆ ಮಂಗಳೂರು ಮತ್ತು ಸೈಂಟ್ ಅಲೋಶಿಯಸ್ ಪದವಿಪೂರ್ವ ಕಾಲೇಜು, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಬಾಸ್ಕೆಟ್‍ಬಾಲ್ ಪಂದ್ಯಾಟದ ಫೈನಲ್‍ನಲ್ಲಿ ಆಳ್ವಾಸ್ ಬಾಲಕಿಯರ ತಂಡವು ಸೈಂಟ್ ಅಲೋಶಿಯಸ್ ಪ.ಪೂ. ಕಾಲೇಜು ತಂಡವನ್ನು 26-6 ಅಂಕಗಳ ಅಂತರದಿಂದ ಸೋಲಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.

