ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ರೆಬೆಲ್ ಸ್ಟಾರ್ ಆಗಿ ಮಿಂಚಿದ್ದ, ಮಾಜಿ ಸಚಿವ ಎಂ.ಎಚ್ ಅಂಬರೀಶ್ (66) ಕೆಲತಿಂಗಳ ಹಿಂದೆ ಶ್ವಾಸಕೋಶ ಹಾಗೂ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು, ನ.24 ಶನಿವಾರ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.

actor-ambarish
ಶನಿವಾರ ಮದ್ಯಾಹ್ನ ತೀವ್ರ ಅಸ್ವಸ್ಥಗೊಂಡ ಇವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ರಾತ್ರಿ ವೇಳೆ ಸಾವನ್ನಪ್ಪಿದ್ದಾರೆ.
ಇವರು ಪತ್ನಿ ಸುಮಲತಾ ಹಾಗೂ ಪುತ್ರ ಅಭಿಷೇಕ್ ಅವರನ್ನು ಅಗಲಿದ್ದಾರೆ.

By suddi9

Leave a Reply

Your email address will not be published. Required fields are marked *