ಮೂಡುಬಿದಿರೆ: ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳಲ್ಲಿ ಸಮಗ್ರ ಬೆಳವಣಿಗೆಗೆ ಪಠ್ಯೇತರ ಚಟುವಟಿಕೆಗಳು ಪೂರಕ. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಬರುವಂತಹ ಸ್ಪರ್ಧೆಗಳಲ್ಲಿ ಸಿಗುವ ಅವಕಾಶಗಳನ್ನು ಬಳಸಿಕೊಂಡು ಸಾಧನೆಗೆ ಮುಂದಾಗಬೇಕು. ಸೋಲನ್ನು ಋಣಾತ್ಮಕವಾಗಿ ಸ್ವೀಕರಿಸದೆ ಧನಾತ್ಮಕವಾಗಿ ಸ್ವೀಕರಿಸಿ ಮುನ್ನುಗ್ಗಬೇಕು. ಗೆಲುವು ಸಾಧಿಸಿದವರು ಮತ್ತಷ್ಟು ಸಾಧನೆ ಮಾಡಿ ಯಶಸ್ಸುಗಳಿಸಬೇಕು ಎಂದು ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಪ್ರಭಾರ ಉಪನಿರ್ದೇಶಕಿ ಎಲ್ವಿರಾ ಫಿಲೋಮಿನಾ ಹೇಳಿದರು.

news (2)
ದ.ಕ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ, ಮಹಾವೀರ ಪ.ಪೂ. ಕಾಲೇಜು ಜಂಟಿ ಆಶ್ರಯದಲ್ಲಿ ಮಹಾವೀರ ಕಾಲೇಜಿನಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಸಾಹಿತ್ಯ, ಸಾಂಸ್ಕøತಿಕ ಸ್ಪರ್ಧೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ ಮಾಜಿ ಸಚಿವ, ಆಡಳಿತ ಮಂಡಳಿಯ ಅಧ್ಯಕ್ಷ ಕೆ. ಅಭಯಚಂದ್ರ ಜೈನ್ ಮಾತನಾಡಿ, ಪಿಯು ಹಂತವು ಸವಾಲಿನ ಕಾಲ ಘಟ್ಟವಾಗಿದೆ. ಪಠ್ಯೇತರ ಚಟುವಟಿಕೆಗಳಿಂದ ಕ್ರೀಯಾಶೀಲ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಧ್ಯ. ಆತ್ಮ ಸ್ಥೈರ್ಯ ಹೆಚ್ಚಿಸುವ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಶಿಕ್ಷಣದೊಂದಿಗೆ ಸಾಧನೆ ಮಾಡಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಮುಖ್ಯ ಅತಿಥಿಗಳಾಗಿ ಮಹಾವೀರ ಕಾಲೇಜಿನ ಪ್ರಾಂಶುಪಾಲ. ಪ್ರೊ. ಚಂದ್ರಶೇಖರ ದೀಕ್ಷಿತ್, ಜಿಲ್ಲಾ ಪದವಿಪೂರ್ವ ಪ್ರಾಚಾರ್ಯರ ಸಂಘದ ಅಧ್ಯಕ್ಷ ಕೆ.ಕೆ ಉಪಾಧ್ಯಾಯ ಭಾಗವಹಿಸಿದರು. ಮಹಾವೀರ ಪ.ಪೂ. ಕಾಲೇಜಿನ ಪ್ರಾಂಶುಪಾಲ ಪ್ರೊ. ರಮೇಶ್ ಭಟ್ ಸ್ವಾಗತಿಸಿದರು. ಉಪನ್ಯಾಸಕಿ ಪ್ರಮೀಳಾ ವಂದಿಸಿದರು. ಉಪನ್ಯಾಸಕಿ ವಿಜಯಲಕ್ಷ್ಮಿ ಕಾರ್ಯಕ್ರಮ ನಿರ್ವಹಿಸಿದರು.

By suddi9

Leave a Reply

Your email address will not be published. Required fields are marked *