ಮಾಣಿ : “ಬಲಿಷ್ಠ ಸಮಾಜದ ನಿರ್ಮಾಣಕ್ಕೆ ಉತ್ತಮ ಸಂಸ್ಕಾರಯುತ ಯುವಪೀಳಿಗೆಯ ಅಗತ್ಯವಿದೆ. ಪೋಷಕರು ಮಕ್ಕಳ ವಿದ್ಯಾಭ್ಯಾಸಕ್ಕೆ ಮಾತ್ರವಲ್ಲದೆ, ಅವರ ಭೌತಿಕ ವಿಕಸನಕ್ಕೆ ಒತ್ತು ನೀಡಬೇಕು” . ಎಂದು ಬಂಟ್ವಾಳ ತಾಲೂಕು ಪಂಚಾಯತ್ನ ಅಧ್ಯಕ್ಷ ಶ್ರೀ ಕೆ. ಚಂದ್ರಹಾಸ ಕರ್ಕೇರ ಹೇಳಿದರು. ಅವರು ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ರಜತರಶ್ಮಿ ರಂಗಮಂದಿರದಲ್ಲಿ ನಡೆದ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಬಿ.ಎಸ್ ನಾೈಕ್, ಕಾರ್ಯದರ್ಶಿ ಕೊಂಬಿಲ ನಾರಾಯಣ ಶೆಟ್ಟಿ, ಟ್ರಸ್ಟಿ ಜಯಲಕ್ಷ್ಮಿ ಎನ್, ಉಪಾಧ್ಯಕ್ಷ ಅಪ್ರಾಯ ಪೈ , ಶಿಕ್ಷಕ – ರಕ್ಷಕ ಸಂಘದ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ, ಉಪಾಧ್ಯಕ್ಷೆ ಲಕ್ಷ್ಮೀ, ವಿದ್ಯಾರ್ಥಿ ನಾಯಕ ವಿಜೇತ್ ಕೆ.ಎಂ ಮತ್ತಿತರು ಉಪಸ್ಥಿತರಿದ್ದರು.
ಸನ್ಮಾನ ಮತ್ತು ಬಹುಮಾನ ವಿತರಣೆ : ಎಸ್.ಎಸ್.ಎಲ್.ಸಿ ಯಲ್ಲಿ ಅಧಿಕ ಅಂಕ ಗಳಿಸಿದ ಗಹನಶ್ರೀ ಮತ್ತು ವಿಶಿಷ್ಟ ಶ್ರೇಣಿ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಆಡಳಿತಾಧಿಕಾರಿ ಸಿ.ಶ್ರೀಧರ್ ಪ್ರಸ್ತಾವನೆಗೈದರು, ಸಂಚಾಲಕ ಜೆ.ಪ್ರಹ್ಲಾದ್.ಶೆಟ್ಟಿ ಸ್ವಾಗತಿಸಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮೀ .ವಿ.ಶೆಟ್ಟಿ ವರದಿ ಮಂಡಿಸಿದರು . ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಗ್ರೇಸ್.ಪಿ.ಸಲ್ಡಾನಾ ವಂದಿಸಿದರು. ಶಿಕ್ಷಕಿಯರಾದ ಸುಧಾ ಎನ್.ರಾವ್ , ರಶ್ಮೀ ಫೆರ್ನಾಂಡೀಸ್ ಕಾರ್ಯಕ್ರಮ ನಿರ್ವಹಿಸಿದರು. ಬಳಿಕ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು.

