ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ) ಮೂಡಬಿದಿರೆಯು ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ವೈಭವದ ರಾಷ್ಟ್ರೀಯ ಸಾಂಸ್ಕøತಿಕ ಉತ್ಸವ ‘ಆಳ್ವಾಸ್ ವಿರಾಸತ್’. ಈ ವರ್ಷ ಆಳ್ವಾಸ್ ವಿರಾಸತ್‍ಗೆ 25ನೇ ವರ್ಷವಾಗಿದ್ದು ಅತ್ಯಂತ ಸಂಭ್ರಮದಿಂದ ಕಾರ್ಯಕ್ರಮಗಳನ್ನು ಸಂಘಟಿಸಿ, ಸಂಸ್ಕøತಿ ಪ್ರಿಯರಿಗೆ ಸಾಂಸ್ಕøತಿಕ ರಸದೌತಣವನ್ನು ನೀಡಲು ಯೋಚಿಸಲಾಗಿದೆ. ಇದಕ್ಕಾಗಿ ಈಗಾಗಲೇ ಸಿದ್ಧತೆಯಲ್ಲಿ ತೊಡಗಿದ್ದು ‘ಆಳ್ವಾಸ್ ವಿರಾಸತ್ 2019’ ಅತ್ಯಂತ ಯಶಸ್ವಿ ಉತ್ಸವವಾಗಿಸುವಲ್ಲಿ ಪ್ರಯತ್ನಿಸಲಾಗುತ್ತಿದೆ.

‘ಆಳ್ವಾಸ್ ವಿರಾಸತ್ 2019’ ಕ್ಕೆ ದಿನಾಂಕ ನಿಗದಿಯಾಗಿದ್ದು ಜನವರಿ 4 ರಂದು ಪ್ರಾರಂಭವಾಗಿ 6ರಂದು ಮುಕ್ತಾಯಗೊಳ್ಳಲಿದೆ. ಶುಕ್ರವಾರ, ಶನಿವಾರ ಮತ್ತು ಭಾನುವಾರಗಳು ಸೇರಿ ಮೂರು ದಿನಗಳ ಕಾಲ ಈ ಸಾಂಸ್ಕøತಿಕ ಉತ್ಸವವು ಜರುಗಲಿದೆ. ಎಂದಿನಂತೆ ದಿನವೊಂದಕ್ಕೆ ಎರಡು ಅವಧಿಗಳಿದ್ದು ಪೂರ್ವಾರ್ಧದಲ್ಲಿ ಸಂಗೀತವೂ, ಉತ್ತಾರಾರ್ಧದಲ್ಲಿ ನೃತ್ಯವೂ ಸಂಸ್ಕøತಿ ಪ್ರಿಯರ ಮನಸ್ಸನ್ನು ಸೂರೆಗೊಳ್ಳಲಿದೆ.
ಪ್ರತಿದಿನ ಮುಸ್ಸಂಜೆ 6.00 ಗಂಟೆಗೆ ಪ್ರಾರಂಭವಾಗುವ ಕಾರ್ಯಕ್ರಮಗಳು ರಾತ್ರಿ 10.30ಕ್ಕೆ ಮುಕ್ತಾಯಗೊಳ್ಳುತ್ತವೆ. ಜನವರಿ 4ರಂದು ಒಂದು ದಿನ ಮಾತ್ರ ಮುಸ್ಸಂಜೆ 5.30ರಿಂದ 6.30ರವರೆಗೆ ಕೇವಲ 60ನಿಮಿಷಗಳ ಉದ್ಘಾಟನೆಯ ಸಭಾಕಾರ್ಯಕ್ರಮವಿರುತ್ತದೆ. ಉಳಿದಂತೆ ಎಲ್ಲೂ ಸಭಾಕಾರ್ಯಕ್ರಮಗಳಿರುವುದಿಲ್ಲ.
ಪುತ್ತಿಗೆ ವಿವೇಕಾನಂದ ನಗರದಲ್ಲಿರುವ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ವೇದಿಕೆಯಲ್ಲಿ ಆಳ್ವಾಸ್ ವಿರಾಸತ್ ನಡೆಯಲಿದೆ. ಬೃಹತ್ ವೇದಿಕೆಯಿದಾಗಿದ್ದು, 50 ಸಾವಿರಕ್ಕಿಂತ ಹೆಚ್ಚಿನ ಪ್ರೇಕ್ಷಕರು ಕಣ್ತುಂಬಿಕೊಳ್ಳಲು ಅನುವಾಗುವಂಥಾ ಆಸನದ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತದೆ.
ಜನವರಿ 04, 05 ಮತ್ತು 06ನೇ ದಿನಾಂಕಗಳಂದು ಮೂರು ದಿನಗಳ ಕಾಲ ನಡೆಯುವ ರಾಷ್ಟೀಯ ಸಾಂಸ್ಕøತಿಕ ಉತ್ಸವ ಆಳ್ವಾಸ್ ವಿರಾಸತ್ 2019ಕ್ಕೆ ಸಂಸ್ಕøತಿ ಪ್ರಿಯರೂ, ಕಲಾ ಪ್ರೇಮಿಗಳೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಉತ್ಸವದ ಯಶಸ್ಸಿಗೆ ಸಹಕರಿಸಬೇಕೆಂದು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಂ ಮೋಹನ್ ಆಳ್ವ ತಿಳಿಸಿದ್ದಾರೆ.
