ಮೂಡುಬಿದಿರೆ: ಹುಟ್ಟು ಎಂಬುದು ಆಕಸ್ಮಿಕವಾದರೆ ಸಾವು ನಿಶ್ಚಿತ. ಕೆಲವರು ಹುಟ್ಟುವಾಗಲೇ ವಿಕಲಚೇತನರಾದರೆ ಇನ್ನು ಕೆಲವರು ತಮ್ಮ ಜೀವನದಲ್ಲಿ ನಡೆಯುವ ಕೆಲವು ಘಟನೆಗಳಿಂದ ವಿಕಲಚೇತನರಾಗುತ್ತಾರೆ. ಇಂತಹ ಸಂದರ್ಭದಲ್ಲಿ ಹೆತ್ತವರು ಮತ್ತು ಸಮಾಜವು ಅವರು ಕುಗ್ಗದಂತೆ ಆತ್ಮಸ್ಥೈರ್ಯ ಮತ್ತು ಆತ್ಮವಿಶ್ವಾಸವನ್ನು ತುಂಬಿಸಿ ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಬಾಳುವಂತೆ ಮಾಡುವ ಜವಾಬ್ದಾರಿಯಿದೆ ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.

ಜಿಲ್ಲಾ ಪಂಚಾಯಿತಿ ಸಾರ್ವಜನಿಕ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ ಅಭಿಯಾನ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಮೂಡುಬಿದಿರೆ ಇವುಗಳ ಜಂಟಿ ಆಶ್ರಯದಲ್ಲಿ ಸಮಾಜ ಮಂದಿರದಲ್ಲಿ ನಡೆದ ವಿಶ್ವ ಅಂಗವಿಕಲರ ದಿನಾಚರಣೆ ಮತ್ತು ಪರಿಸರ ನಿರ್ಮಾಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯುತ್ ಅವಘಡದಿಂದ ಕೈಯನ್ನು ಕಳೆದುಕೊಂಡು ಉದ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವ ಗಣೇಶ್ ಕಾಮತ್ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾಗಿರುವ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಜಿ.ಪಂ ಸದಸ್ಯ ಕೆ.ಪಿ ಸುಚರಿತ ಶೆಟ್ಟಿ, ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ನಾಗೇಶ್, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಹಾದೇವ, ಅನುದಾನಿತ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಯರಾಮ್ ಭಟ್ ಅತಿಥಿಗಳಾಗಿ ಭಾಗವಹಿಸಿದ್ದರು. ಸಮನ್ವಂiÀi ಶಿಕ್ಷಣದ ತಾಲೂಕು ಸಮನ್ವಯಾಧಿಕಾರಿ ಸುಚಿತ್ರ ಗೋನ್ಸಾಲಿಸ್, ಬಿಐಇಆರ್‍ಟಿ ನಿಶಾ, ಶರ್ಮಿಳಾ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಆಶಾ ಸ್ವಾಗತಿಸಿದರು. ಬಿಐಇಆರ್‍ಟಿ ರೋಬರ್ಟ್ ಬಹುಮಾನಿತರ ಪಟ್ಟಿ ವಾಚಿಸಿದರು. ಬಿಐಇಆರ್‍ಟಿ ಸುಶೀಲಾ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು. ಬಿಆರ್‍ಸಿ ಗೀತಾ ವಂದಿಸಿದರು.
