ಮೂಡುಬಿದಿರೆ: ಆಂಧ್ರಪ್ರದೇಶದ ಆಚಾರ್ಯ ನಾಗಾರ್ಜುನ ವಿ.ವಿ. ಗುಂಟೂರು ಇಲ್ಲಿ ಗುರುವಾರ (ನ.29 ರಂದು) ಜರುಗಿದ ಅಖಿಲ ಭಾರತ ಅಂತರ್ ವಿ.ವಿ. ಭಾರ ಎತ್ತುವ ಸ್ಪರ್ಧೆಯಲ್ಲಿ ಆಳ್ವಾಸ್ ಕಾಲೇಜಿನ ಲಾವಣ್ಯ ರೈ ಕಂಚಿನ ಪದಕ ಪಡೆದಿದ್ದಾರೆ.

ಆಳ್ವಾಸ್ ಕಾಲೇಜಿನ ದ್ವಿತೀಯ ಬಿ.ಎ. ವಿದ್ಯಾರ್ಥಿನಿಯಾಗಿರುವ ಈಕೆ, ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ಉಚಿತ ವಿದ್ಯಾಭ್ಯಾಸವನ್ನು ಪಡೆಯುತ್ತಿದ್ದಾರೆ.
ಮಂಗಳೂರು ವಿ.ವಿಯನ್ನು ಪ್ರತಿನಿಧಿಸಿ ಡಿಸೆಂಬರ್ 14 ರಿಂದ ನಾಗ್ಪುರದಲ್ಲಿ ಜರುಗಲಿರುವ ರಾಷ್ಟ್ರೀಯ ಜೂನಿಯರ್ ಭಾರ ಎತ್ತುವ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ.
ಇವರು ಸುಳ್ಯ ತಾಲೂಕು ಅರಂಗೋಡು ಜಲಜಾಕ್ಷಿ ರೈ ಮತ್ತು ರತ್ನಾಕರ ದಂಪತಿಯ ಸುಪುತ್ರಿ.
