ಬಂಟ್ವಾಳ:ಇಲ್ಲಿನ ಬಡ್ಡಕಟ್ಟೆ ಶ್ರೀ ನಿತ್ಯಾನಂದ ಗೋವಿಂದ ಸ್ವಾಮಿ ಮಂದಿರದಲ್ಲಿ 10ನೇ ವರ್ಷದ ಪ್ರತಿಷ್ಠಾ ವರ್ಧಂತಿ ಮಹೋತ್ಸವ ಮತ್ತು ರಜತ ಪಲ್ಲಕಿ ಉತ್ಸವ ಕಾರ್ಯಕ್ರಮವು ಜ.6ರಂದು ನಡೆಯಲಿದೆ.ಅಂದು ಬೆಳಿಗ್ಗೆ ಗಂಟೆ 8ರಿಂದ 10ರತನಕ ಸ್ವಾಮೀಜಿದ್ವಯರ ಪಂಚಲೋಹದ ವಿಗ್ರಹಕ್ಕೆ ಸ್ವತಃ ಸೀಯಾಳ ಅಭಿಷೇಕ ನೆರವೇರಿಸಲು ಭಕ್ತರಿಗೆ ಅವಕಾಶ ನೀಡಲಾಗಿದೆ.
ಬೆಳಿಗ್ಗೆ ಗಂಟೆ 11ರಿಂದ 12ರತನಕ ಭಜನೆ, ಮಧ್ಯಾಹ್ನ ಗಂಟೆ 12ರಿಂದ ಮಹಾಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.
ಸಂಜೆ ಗಂಟೆ 6ರಿಂದ ರಜತ ಪಲ್ಲಕಿಯಲ್ಲಿ ಉತ್ಸವ ಮೂರ್ತಿ ಮೆರವಣಿಗೆ ಹಾಗೂ ರಾತ್ರಿ ನೇತ್ರಾವತಿ ನದಿ ತೀರದಲ್ಲಿ ಕಟ್ಟೆ ಪೂಜೆ ನಡೆಯಲಿದೆ ಎಂದು ಆಡಳಿತ ಮಂಡಳಿ ಅಧ್ಯಕ್ಷ ಬಿ.ಯೋಗೀಶ ಸಪಲ್ಯ ತಿಳಿಸಿದ್ದಾರೆ.
