ಮೂಡುಬಿದಿರೆ: ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸೀಟುಗಳನ್ನು ಪಡೆದು ಮೂಡಬಿದಿರೆಯಲ್ಲಿ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಮಂಗಳವಾರ ಸಾಯಂಕಾಲ ಮೂಡುಬಿದಿರೆಯಲ್ಲಿ ವಿಜಯೋತ್ಸವ ನಡೆಯಿತು.

ಈ ಸಂದರ್ಭದಲ್ಲಿ ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರ, ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಪ್ರಿಯಾ ಡಿ. ಶೆಟ್ಟಿ, ಮುಡಾ ಮಾಜಿ ಅಧ್ಯಕ್ಷ ಸುರೇಶ್ ಪ್ರಭು, ಎಪಿಎಂಸಿ ಅಧ್ಯಕ್ಷ ಪ್ರವೀಣ್ ಕುಮಾರ್ ಜೈನ್ ಶಿರ್ತಾಡಿ, ಮೂಡುಬಿದಿರೆ ಯುವ ಕಾಂಗ್ರೆಸ್ ಅಧ್ಯಕ್ಷ ಚಂದ್ರಹಾಸ ಸನಿಲ್, ವಾಲ್ಪಾಡಿ ಗ್ರಾ.ಪಂ. ಉಪಾಧ್ಯಕ್ಷ ಅರುಣ್ ಶೆಟ್ಟಿ, ಬೆಳುವಾಯಿ ಗ್ರಾ.ಪಂ. ಮಾಜಿ ಅಧ್ಯಕ್ಷ ರಾಘು ಪೂಜಾರಿ, ಉಮೇಶ್ ದೇವಾಡಿಗ, ಅನಿಲ್ ಲೋಬೋ, ಜೊಸ್ಸಿ ಮಿನೇಜಸ್, ಇಕ್ಬಾಲ್ ಕರೀಂ ಉಪಸ್ಥಿತರಿದ್ದರು.
