ಬಂಟ್ವಾಳ : ದ.ಕ.ಜಿಲ್ಲಾ ಮಾಜಿ ಉಸ್ತುವಾರಿ ಸಚಿವ ಬಿ.ರಮಾನಾಥ ರೈ , ಹಾಲಿ ಉಸ್ತುವಾರಿ ಸಚಿವ ಯು.ಟಿ.ಖಾದರ್, ವಿಧಾನ ಪರಿಷತ್ ಸದಸ್ಯ ಮತ್ತು ಡಿಸಿಸಿ ಅಧ್ಯಕ್ಷ ಕೆ.ಹರೀಶ್ ಕುಮಾರ್ ರ ಶಿಫಾರಸಿನ ಮೇರೆಗೆ ಕರ್ನಾಟಕ ಪ್ರದೇಶ ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.ಶಾಂತವೀರ ನಾಯ್ಕ ರವರು ದ.ಕ.ಜಿಲ್ಲಾ ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಅಧ್ಯಕ್ಷರಾಗಿ ಬಿ.ಎಮ.ಅಬ್ಬಾಸ್ ಆಲಿ ರವರನ್ನು ನೇಮಕ ಗೊಳಿಸಿ ಆದೇಶ ಹೊರಡಿಸಿದ್ದಾರೆ.

B.M.Abbas Ali
ಇಂಜಿನಿಯರಿಂಗ್ ಪದವೀಧರರಾಗಿರುವ ಅಬ್ಬಾಸ್ ಆಲಿ ಅವರು ಎನ್.ಎಸ್.ಯು.ಐ ಯುವ ಕಾಂಗ್ರೆಸ್ ಪದಾಧಿಕಾರಿಯಾಗಿ, ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಮತ್ತು 8ವರ್ಷಗಳ ಕಾಲ ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ.

By suddi9

Leave a Reply

Your email address will not be published. Required fields are marked *