ಮೂಡುಬಿದಿರೆ: ವಂದೇಮಾತರಂ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಇದರಿಂದ ಪ್ರವರ್ತಿತ ಸ್ವಸಹಾಯ ಸಂಘಗಳ ವಾರ್ಷಿಕ ಸಮಾವೇಶವು ಬ್ರಹ್ಮಶ್ರೀ ನಾರಾಯಣಗುರು ಸಂಘದ ಕಾಮಧೇನು ಸಭಾಭವನದಲ್ಲಿ ಭಾನುವಾರ ಜರುಗಿತು.
ಕಾರ್ಯಕ್ರಮವನ್ನು ಶಾಸಕ ಉಮಾನಾಥ ಕೋಟ್ಯಾನ್ ಉದ್ಘಾಟಿಸಿ, ಸ್ವಸಹಾಯ ಸಂಘಗಳು ಆರ್ಥಿಕ ಸ್ವಾವಲಂಬನೆಯನ್ನು ಕಲಿಸಿಕೊಡುವುದರ ಜೊತೆಗೆ ಸಂಘಟನೆಗೂ ಒತ್ತು ನೀಡಬೇಕು ಎಂದರು.

Swasahaya samavesha
ವಂದೇಮಾತರಂ ವಿವಿಧೋದ್ದೇಶ ಸೌಹಾರ್ದ ಸಹಕಾರಿಯ ಅಧ್ಯಕ್ಷ ಪ್ರೊ.ಎಂ.ವಾಸುದೇವ ಭಟ್ ಅಧ್ಯಕ್ಷತೆ ವಹಿಸಿದ್ದರು.
ಎಂ.ಆರ್.ಪಿ.ಎಲ್. ಚೀಫ್ ಮೆನೇಜರ್ ವೀಣಾ ಟಿ.ಶೆಟ್ಟಿ ಹೆಣ್ಣು ಮತ್ತು ಸಾಮಾಜಿಕ ಸ್ಥಿತ್ಯಂತರ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ನೀಡಿ, ಮಹಿಳೆಯರು ಸ್ವಾವಲಂಬಿಗಳಾಗಬೇಕು. ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ನೀಡುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದರು.
ರೋಟರಿ ಕ್ಲಬ್ ಅಧ್ಯಕ್ಷ ಡಾ|ರಮೇಶ್, ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಮೂಡುಬಿದಿರೆ ಇದರ ಅಧ್ಯಕ್ಷ ರವೀಂದ್ರ ಮುಖ್ಯ ಅತಿಥಿಗಳಾಗಿದ್ದರು.
ಕಾರ್ಯಕ್ರಮವನ್ನು ವಂದೇಮಾತರಂ ವಿವಿಧೋದ್ದೇಶ ಸೌಹಾರ್ಧ ನಿಯಮಿತ ಇದರ ಉಪಾಧ್ಯಕ್ಷ ಕೆ.ಶ್ಯಾಮ ಹೆಗ್ಡೆ ಸ್ವಾಗತಿಸಿ, ಸ್ವಸಹಾಯ ಸಂಘಗಳ ಮೇಲ್ವೀಚಾರಕ ಅಶೋಕ್ ವಾರ್ಷಿಕ ವರದಿ ವಾಚಿಸಿದರು. ಆಳ್ವಾಸ್ ಕಾಲೇಜಿನ ಸಮಾಜಕಾರ್ಯ ಸ್ನಾತಕೋತ್ತರ ಪದವಿ ವಿಭಾಗದ ಸಹಪ್ರಾಧ್ಯಾಪಕ ಕೃಷ್ಣಮೂರ್ತಿ ಬಿ. ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಕರ್ ಡಿ. ವಂದಿಸಿದರು.
ಸಮಾರೋಪ ಸಮಾರಂಭ
ರಾಷ್ಟ್ರ ಸೇವಿಕ ಸಮಿತಿ ಕರ್ನಾಟಕ ದಕ್ಷಿಣ ಪ್ರಾಂತ ಸಹ ಬೌದ್ಧಿಕ್ ಪ್ರಮುಖ್ ಭಗಿನಿ ಕುಮುದಿನಿ ಶೆಣೈ ಸಮಾರೋಪ ಭಾಷಣ ಮಾಡಿದರು. ವಂದೇಮಾತರಂ ವಿವಿಧೋದ್ದೇಶ ಸೌಹಾರ್ದ ಸಹಕಾರಿಯ ಅಧ್ಯಕ್ಷ ಪ್ರೊ. ಎಂ. ವಾಸುದೇವ ಭಟ್ ಅಧ್ಯಕ್ಷೀಯ ಭಾಷಣ ಮಾಡಿದರು.
ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆಯನ್ನು ರೋಟರಿ ಕ್ಲಬ್ ಆಫ್ ಮೂಡುಬಿದಿರೆ ಟೆಂಪಲ್ ಟೌನ್‍ನ ಅಧ್ಯಕ್ಷ ವಿನ್ಸೆಂಟ್ ಡಿ’ಕೋಸ್ತ ನೆರವೇರಿಸಿದರು.
ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿಯಲ್ಲಿ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಯಿತು.
ಆಳ್ವಾಸ್ ಸಮಾಜಕಾರ್ಯ ಸ್ನಾತಕೋತ್ತರ ಪದವಿ ವಿಭಾಗದ ಸಹಪ್ರಾಧ್ಯಾಪಕ ಕೃಷ್ಣಮೂರ್ತಿ ಬಿ. ಕಾರ್ಯಕ್ರಮ ನಿರೂಪಿಸಿ, ಸ್ವಸಹಾಯ ಸಂಘಗಳ ಮೇಲ್ವೀಚಾರಕ ಅಶೋಕ್ ವಂದಿಸಿದರು.

By suddi9

Leave a Reply

Your email address will not be published. Required fields are marked *