ಬಂಟ್ವಾಳ:ತಾಲ್ಲೂಕಿನ ಸಜಿಪನಡು ಸಮೀಪದ ನೇತ್ರಾವತಿ ನದಿ ತೀರದಲ್ಲಿ ಕಳೆದ ಕೆಲವು ಸಮಯದಿಂದ ಅಕ್ರಮವಾಗಿ ಜಾನುವಾರುಗಳನ್ನು ಕಡಿದು ಮಾಂಸ ಮಾರಾಟ ಮಾಡುತ್ತಿದ್ದ ತಾತ್ಕಾಲಿಕ ಕಸಾಯಿಖಾನೆಗೆ ಗ್ರಾಮಾಂತರ ಠಾಣೆ ಎಸೈ ಪ್ರಸನ್ನ ಎಂ. ನೇತೃತ್ವದ ಪೊಲೀಸರು ದಾಳಿ ನಡೆಸಿದ ಘಟನೆ ಸೋಮವಾರ ರಾತ್ರಿ ನಡೆದಿದೆ.
ಇದೇ ವೇಳೆ ಜಾನುವಾರು ಕಡಿದು ಮಾರಾಟಕ್ಕೆ ಸಿದ್ಧಪಡಿಸಿದ್ದ ಮಾಂಸ ಸಹಿತ, ಎರಡು ಕತ್ತಿ, ಎಲೆಕ್ಟ್ರಾನಿಕ್ ತಕ್ಕಡಿ ಮತ್ತು ನಾಲ್ಕು ಸಜೀವ ಕರುಗಳು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
