ಬಂಟ್ವಾಳ:ಇಲ್ಲಿನ ಬಿ.ಸಿ.ರೋಡು ಮಿನಿವಿಧಾನಸೌಧದಲ್ಲಿರುವ ತಾಲ್ಲೂಕು ಕಚೇರಿಯಲ್ಲಿ ಇದೇ 21ರಂದು ಮಂಗಳೂರು ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಮತ್ತಿತರ ಅಧಿಕಾರಿಗಳು ಸಾರ್ವಜನಿಕರಿಂದ ದೂರು ಸ್ವೀಕರಿಸಲಿದ್ದಾರೆ.
ಅಂದು ಬೆಳಿಗ್ಗೆ ಗಂಟೆ 11ರಿಂದ ಮಧ್ಯಾಹ್ನ 1 ಗಂಟೆ ತನಕ ದೂರು ಸ್ವೀಕರಿಸಲಾಗುತ್ತಿದ್ದು, ಸರ್ಕಾರಿ ಕಚೇರಿಯಲ್ಲಿ ನೀಡಲಾಗುವ ಸೇವೆಯಲ್ಲಿ ವಿಳಂಬ ಸಹಿತ ಅಲ್ಲಿನ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಸಂಬಂಧಪಟ್ಟಂತೆ ನಿಗದಿತ ಅರ್ಜಿ  ನಮೂನೆಯಲ್ಲಿ ದೂರು ಸ್ವೀಕರಿಸಲಾಗುವುದು ಎಂದು ತಹಶೀಲ್ದಾರ್ ಕಚೇರಿ ಪ್ರಕಟಣೆ ತಿಳಿಸಿದೆ.

By suddi9

Leave a Reply

Your email address will not be published. Required fields are marked *