ಬಂಟ್ವಾಳ: ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ನವದೆಹಲಿ, ರಾಜ್ಯ ಶಿಕ್ಷಣ, ಸಂಶೋಧನೆ ಮತ್ತು ತರಬೇತಿ ಇಲಾಖೆ, ಬೆಂಗಳೂರು. ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಮಂಗಳೂರು ಇವರು ನಡೆಸಿದ ಜಿಲ್ಲಾ ಮಟ್ಟದ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಇನ್ ಸ್ಪೈರ್ ಅವಾರ್ಡ್ ವಿಜ್ಞಾನ ಮಾದರಿ ವಸ್ತು ಪ್ರದರ್ಶನ ಸ್ಪರ್ಧೆ-2018 ರಲ್ಲಿ ಬಂಟ್ವಾಳ ತಾಲೂಕಿನ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ನಲ್ಕೆಮಾರ್, ಅಮ್ಟಾಡಿ ಗ್ರಾಮದ 8ನೇ ತರಗತಿಯ ಪ್ರದೀಪ್ ರವರು 2018 ಡಿ.19 ಮತ್ತು 20 ರಂದು ಡಾ| ಶಿವರಾಮ ಕಾರಂತ ಪಿಲಿಕುಳ, ನಿಸರ್ಗಧಾಮ ಮಂಗಳೂರು ಇಲ್ಲಿ ನಡೆದ ಜಿಲ್ಲಾ ಮಟ್ಟದ ಇನ್ ಸ್ಪೈರ್ ಅವಾರ್ಡ್ ವಿಜ್ಞಾನ ಮಾದರಿ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ತಾಂತ್ರಿಕ ಕ್ರಮವನ್ನು ಅಳವಡಿಸಿ, ತಯಾರಿಸಿದ ಮಾದರಿಯು ಮೈಸೂರಿನಲ್ಲಿ ಡಿ.27 ಮತ್ತು 28ರಂದು ನಡೆಯುವ ರಾಜ್ಯ ಮಟ್ಟದಲ್ಲಿ ಸ್ಪರ್ಧಿಸಲು ಆಯ್ಕೆಯಾಗಿರುತ್ತಾರೆ.
