ಮೂಡುಬಿದಿರೆ: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಹಾಗೂ ಬೆಂಗಳೂರು ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಬೆಂಗಳೂರಿನ ಫ್ರೇಜರ್ ಟೌನ್‍ನ ಸೈಂಟ್ ಜೋಸೆಫ್ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ಸಾಂಸ್ಕøತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು, ಆ ಸ್ಪರ್ಧೆಯಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿಗೆ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ.

ದ್ವಿತೀಯ ಪಿಯುಸಿ ವಿಭಾಗದ ರಸಪ್ರಶ್ನೆ ಸ್ಪರ್ಧೆಯಲ್ಲಿ ಶ್ಯಾಮ್ ವಿಟಲ್ ಆಮ್ಟೆ ಹಾಗೂ ಶ್ರೇಯಾಂಕ್ ಎಸ್. ಶೇಟ್ ಇವರಿಗೆ ಪ್ರಥಮ ಸ್ಥಾನ ಹಾಗೂ ಇಂಗ್ಲೀಷ್ ಪ್ರಬಂಧ ಸ್ಪರ್ಧೆಯಲ್ಲಿ ನಂದಿನಿ ಎಸ್. ಎಚ್ ತೃತೀಯ ಸ್ಥಾನವನ್ನು ಪಡೆದಿದ್ದಾರೆ.
ಪ್ರಥಮ ಪಿಯುಸಿ ವಿಭಾಗದ ಆಶುಭಾಷಣ ಸ್ಪರ್ಧೆಯಲ್ಲಿ ಪತಂಜಲಿ ಹಾರೆಬೈಲು ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದ ವಿದ್ಯಾರ್ಥಿಗಳು ರೂ.12,000 , ದ್ವಿತೀಯ ಸ್ಥಾನವನ್ನು ಪಡೆದ ವಿದ್ಯಾರ್ಥಿಗಳಿಗೆ ರೂ.9,000 ಹಾಗೂ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ರೂ. 6,000 ನಗದು ಬಹುಮಾನ ಪಡೆದಿದ್ದಾರೆ.
