ಮೂಡುಬಿದಿರೆ: ಕನ್ನಡ ಮಾಧ್ಯಮ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಬದುಕುವ ವಿದ್ಯೆ ಸಿಗುತ್ತದೆ. ಈ ನಿಟ್ಟಿನಲ್ಲಿ ಸರ್ಕಾರವು ಒಂದು ಸಾವಿರ ಕನ್ನಡ ಮಾಧ್ಯಮ ಶಾಲೆಯನ್ನು ತೆರೆಯಲು ಚಿಂತನೆಯನ್ನು ಮಾಡುತ್ತಿದೆ ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.
ಮಾಸ್ತಿಕಟ್ಟೆ-ದ.ಕ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲೆ ಹಾಗೂ ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

Masthikatte School Day
ಪುರಸಭಾ ಸದಸ್ಯೆ ಪ್ರೇಮಾ ಸಾಲ್ಯಾನ್ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶಾಲೆಯಲ್ಲಿ ಏರ್ಪಡಿಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಜಿ.ಪಂ ಸದಸ್ಯ ಕೆ.ಪಿ ಸುಚರಿತ ಶೆಟ್ಟಿ ಬಹುಮಾನವನ್ನು ವಿತರಿಸಿ ಶುಭ ಹಾರೈಸಿದರು.
ಶಾಲೆಯ ಅಭಿವೃದ್ಧಿಗೆ ಜಿ.ಪಂನಿಂದ ಅನುದಾನವನ್ನು ಒದಗಿಸಿರುವ ಜಿ.ಪಂ ಸದಸ್ಯ ಕೆ.ಪಿ ಸುಚರಿತ ಶೆಟ್ಟಿ ಹಾಗೂ ಶಾಲೆಯ ಅಭಿವೃದ್ಧಿಗೆ ಸದಾ ಶ್ರಮಿಸುತ್ತಿರುವ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಸೆಲ್ವ ಕುಮಾರ್ ಅವರನ್ನು ಸನ್ಮಾನಿಸಲಾಯಿತು.
ಪುರಸಭಾ ಸದಸ್ಯರಾದ ಪ್ರಸಾದ್ ಕುಮಾರ್, ನಾಗರಾಜ ಪೂಜಾರಿ, ಉದ್ಯಮಿಗಳಾದ ಆಲ್ವೀನ್ ವಾಲ್ಟರ್ ಡಿ’ಸೋಜಾ, ಪ್ರಥ್ವಿರಾಜ್ ಜೈನ್, ಗಣೇಶ್ ಕಾಮತ್, ಅಶೋಕ್ ಶೆಟ್ಟಿ, ಸಂತೋಷ್ ಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾಗೇಶ್, ಶಿಕ್ಷಣ ಇಲಾಖೆಯ ಡೇಝಿ ಪಿಂಟೋ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಸೆಲ್ವ ಕುಮಾರ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜಗೋಪಾಲ್ ಹಾಗೂ ವಿದ್ಯಾರ್ಥಿ ನಾಯಕ ಪ್ರಣಾಮ್ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಶಾಲಾಭಿವೃದ್ಧಿ ಸಮಿತಿಯ ಸದಸ್ಯ ಶ್ರೀನಿವಾಸ ಸ್ವಾಗತಿಸಿದರು. ಮುಖ್ಯ ಶಿಕ್ಷಕಿ ಸೇಸಮ್ಮ ಬಿ. ವರದಿ ವಾಚಿಸಿದರು. ಗೌರವ ಶಿಕ್ಷಕಿ ಅಕ್ಷತಾ ಮತ್ತು ಅತಿಥಿ ಶಿಕ್ಷಕಿ ರೇಖಾ ಬಹುಮಾನಿತರ ಪಟ್ಟಿ ಓದಿದರು. ಸಂತೋಷ್ ಕುಮಾರ್ ಸಿದ್ಧಕಟ್ಟೆ ಮತ್ತು ಶಿಕ್ಷಕಿ ಮೋಹಿನಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಸಂಗೀತ ವಂದಿಸಿದರು.

 

By suddi9

Leave a Reply

Your email address will not be published. Required fields are marked *