ಮಂಗಳೂರು, ಜ. 8: ಸಮಸ್ತದ ಮಹಾನ್ ನೇತಾರ, ಪ್ರಸ್ತುತ ಸಮಸ್ತದ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ಶೈಖುನಾ ಮಿತ್ತಬೈಲ್ ಅಬ್ದುಲ್ ಜಬ್ಬಾರ್ ಉಸ್ತಾದ್ ಅವರ ನಿಧನ ಸುದ್ದಿ ಕೇಳಿ ಮನಸ್ಸಿಗೆ ಬಹಳ ಆಘಾತವಾಯಿತು ಎಂದು ಎಸ್ಕೆಎಸ್ಸೆಸೆಫ್ ಅಡ್ಡೂರ್ ಕ್ಲಸ್ಟರ್ ಸಂಘಟನಾ ಕಾರ್ಯದರ್ಶಿ ಅಬ್ದುಲ್ ಸಲಾಂ ಸಂತಾಪ ಸೂಚಿಸಿದ್ದಾರೆ.
ಅವರ ಅಗಲುವಿಕೆಯು ಸಮುದಾಯ, ಸಮಾಜಕ್ಕೆ ತುಂಬಲಾರದ ನಷ್ಟ ಎಂದು ಎಸ್ಕೆಎಸ್ಸೆಸೆಫ್ ಅಡ್ಡೂರ್ ಕ್ಲಸ್ಟರ್ ಸಂಘಟನಾ ಕಾರ್ಯದರ್ಶಿ ಅಬ್ದುಲ್ ಸಲಾಂ ಸಂತಾಪ ವ್ಯಕ್ತಪಡಿಸಿದ್ದು, ಅವರ ಅಗಲುವಿಕೆಯ ದು:ಖವನ್ನು ಭರಿಸುವ ಶಕ್ತಿಯನ್ನು ಕುಟುಂಬಕ್ಕೆ ದೇವರು ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.

