ಬಂಟ್ವಾಳ:ಇಲ್ಲಿನ ರಾಯಿ ಅಶ್ವತ್ಥಕಟ್ಟೆಯಲ್ಲಿ ಪ್ರತೀ ವರ್ಷದಂತೆ ಫೆ.6ರಂದು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ. ಈ ಬಗ್ಗೆ ಭಾನುವಾರ ನಡೆದ ವಾರ್ಷಿಕ ಮಹಾಸಭೆಯಲ್ಲಿ ಶ್ರೀ ಸತ್ಯನಾರಾಯಣ ಸೇವಾ ಸಮಿತಿ ನೂತನ ಅಧ್ಯಕ್ಷರಾಗಿ ಕೆ.ಪರಮೇಶ್ವರ ಪೂಜಾರಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
