ಬಂಟ್ವಾಳ:ತಾಲ್ಲೂಕಿನ ಗೋಳ್ತಮಜಲು ಗ್ರಾಮದ ಬಲೈಕೋಡಿ ಎಂಬಲ್ಲಿ ಕಳೆದ ಮಂಗಳವಾರ ವಿಷ ಪದಾರ್ಥ ಸೇವಿಸಿ ಮಂಗಳೂರು ಕಂಕನಾಡಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾ ಸಾವನ್ನಪ್ಪಿದ್ದಾರೆ. ಮೃತರನ್ನು ಸ್ಥಳೀಯ ನಿವಾಸಿ ದಿವಂಗತ ನಾರಾಯಣ ಪೂಜಾರಿ ಎಂಬವರ ಪುತ್ರ ಪ್ರವೀಣ(32) ಎಂದು ಗುರುತಿಸಲಾಗಿದೆ ಎಂದು ನಗರ ಠಾಣೆ ಪೊಲೀಸರು ತಿಳಿಸಿದ್ದಾರೆ.
