ಬಂಟ್ವಾಳ : ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಇದರ ಸಂಯುಕ್ತ ಆಶ್ರಯದಲ್ಲಿ ಮತದಾರರ ದಿನಾಚರಣೆಯನ್ನು ನ್ಯಾಯಾಲಯದ ಆವರಣದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀ ಶರಾದ ಮಹಮ್ಮದ್ ಇಮ್ತಿಯಾಝ್ ಅಹಮ್ಮದ್ ಉದ್ಘಾಟಿಸಿದರು. ವಕೀಲರ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಜೈನ್ ಅಧ್ಯಕ್ಷತೆ ವಹಿಸಿದ್ದರು.

DSC_0674ವೇದಿಕೆಯಲ್ಲಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಪ್ರತಿಭಾ ಡಿ.ಎಸ್, ವಕೀಲರ ಸಂಘದ ಮಾಜಿ ಅಧ್ಯಕ್ಷ ವೆಂಕಟ್ರಮಣ ಶೆಣೈ ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿ ಚಂದ್ರಶೇಖರ ರಾವ್ ಪುಂಚಮೆ ಮತದಾರರ ದಿನಾಚರಣೆ ಮಹತ್ವ ದ ಬಗ್ಗೆ ಮಾಹಿತಿ ನೀಡಿದರು. ನ್ಯಾಯವಾದಿ ಆಶಾಮಣಿ ಸ್ವಾಗತಿಸಿದರು. ನ್ಯಾಯವಾದಿ ಜಲೀಲ್ ವಂದಿಸಿ ಕಾರ್ಯಕ್ರಮ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *