ವಿಟ್ಲ : ವಿದ್ಯಾರ್ಥಿಗಳಿಗೆ ವ್ಯವಹಾರದ ಚತುರತೆಯನ್ನು ತಿಳಿಸಿಕೊಡುವ ನಿಟ್ಟಿನಿಂದ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ಮೆಟ್ರಿಕ್ ಮೇಳವನ್ನು ಹಮ್ಮಿಕೊಳ್ಳಲಾಯಿತು. ಬಾಲವಿಕಾಸ ಕ್ರೀಡಾಂಗಣದಲ್ಲಿ ನಡೆದ ಈ ಮೆಟ್ರಿಕ್ ಮೇಳವನ್ನು ಸಂಸ್ಥೆಯ ಸಂಚಾಲಕರಾದ ಜೆ.ಪ್ರಹ್ಲಾದ್ ಶೆಟ್ಟಿ ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು ನಂತರ ಮಾತನಾಡಿದ ಅವರು ಶಾಲೆಯಲ್ಲಿ ನಡೆಸಲ್ಪಡುವ ಪ್ರತಿ ಚಟುವಟಿಕೆಯೂ ಕಲಿಕೆಯ ಒಂದು ಭಾಗ. ವೈಯಕ್ತಿಕ ಜೀವನದ ಸಾಮಾಜಿಕ ಸನ್ನಿವೇಶಗಳಲ್ಲಿ ಹೇಗೆ ವ್ಯವಹರಿಸಬೇಕು? ಎಂಬುದರ ಅರಿವು ಮೂಡಿಸಲು ಈ ಮೇಳವನ್ನು ಆಯೋಜನೆ ಮಾಡಲಾಗಿದೆ ಎಂದರು.
ಶಾಲಾ ವಿದ್ಯಾರ್ಥಿಗಳನ್ನೊಳಗೊಂಡ,ವಿವಿಧ ಶೈಕ್ಷಣಿಕ ಸಂಘಗಳ ಜಂಟಿ ಆಶ್ರಯದಲ್ಲಿ ಆಹಾರ, ಪಾನೀಯ ಇತ್ಯಾದಿ ಉತ್ಪನ್ನಗಳ ಹಲವಾರು ಮಳಿಗೆಗಳು ಯಶಸ್ವಿಯಾಗಿ ಕಾರ್ಯನಿರ್ವಹಿಸಿದವ ಶಾಲಾ ಆಡಳಿತಾಧಿಕಾರಿ ಸಿ.ಶ್ರೀಧರ್, ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮೀ ವಿ. ಶೆಟ್ಟಿ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಗ್ರೇಸ್ ಪಿ.ಸಲ್ದಾನಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸಹಶಿಕ್ಷಕಿ ರಶ್ಮಿ ಫೆರ್ನಾಂಡಿಸ್ ಕಾರ್ಯಕ್ರಮ ನಿರೂಪಿಸಿದರು.
