ಬಂಟ್ವಾಳ: ಮಳೆ ನೀರನ್ನು ಸಂರಕ್ಷಿಸಿ ಅಮೂಲಕ ಅಂತರ್ಜಲ ವೃದ್ದಿ ಮಾಡಲು ಕ್ರಮಕೈಗೊಳ್ಳಲು ಮುಂದಾಗಬೇಕು ಎಂದು ಬಂಟ್ವಾಳ ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ ತಿಳಿಸಿದ್ದಾರೆ.
ಬಂಟ್ವಾಳ ತಾಪಂನ ಎಸ್ ಜಿಎಸ್ ವೈ ಸಭಾಂಗಣದಲ್ಲಿ ಗುರುವಾರ ನಡೆದ ಅಂತರ್ಜಲ ನಿರ್ದೇಶನಾಲಯ ಬೆಂಗಳೂರು ಹಾಗೂ ಅಂತರ್ಜಲ ಕಚೇರಿ ಮಂಗಳೂರು ಇದರ ವತಿಯಿಂದ ಮಳೆ ನೀರಿನ ಸಂಗ್ರಹಣೆ ಮತ್ತು ಮರುಬಳಕೆ , ಅಂತರ್ಜಲ ಸಂರಕ್ಷಣೆ , ಕಲುಷಿತ ತಡೆಗಟ್ಟುವಿಕೆ , ತೆರೆದ,ತ್ಯಕ್ತ ಕೊಳವೆ ಬಾವಿಗಳಲ್ಲಿ ಚಿಕ್ಕ ಮಕ್ಕಳು ಬೀಳದಂತೆ ನಿಯಂತ್ರಿಸುವ ಕುರಿತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ವಾಟರ್ ಮ್ಯಾನ್ ರವರಿಗೆ ಒಂದು ದಿನದ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು,ಮುಂದಿನ ದಿನಗಳಲ್ಲಿ ಉಂಟಾಗಬಹುದಾದ ನೀರಿನ ಸಮಸ್ಯೆಯನ್ನು ಬಗೆಹರಿಸಲು ಕ್ರಮಕೈಗೊಳ್ಳುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

IMG_0151
ಬಂಟ್ಬಾಳ ತಹಶಿಲ್ದಾರ್ ರಶ್ಮಿ ಅವರು ಮಾತನಾಡಿ, ಅಂತರ್ಜಲ ದ ಅಭಿವೃದ್ಧಿಯ ಮಹತ್ವ ವನ್ನು ಅಧಿಕಾರಿ ಗಳು ಇತರರಿಗೆ ತಿಳಿಸುವ ಕೆಲಸ ಮಾಡಬೇಕಾಗಿದೆ.
ನೀರಿನ ಸಮಸ್ಯೆ ಪರಿಹರಿಸುವಲ್ಲಿ ಅಧಿಕಾರಿ ಗಳೊಂದಿಗೆ ಸಾರ್ವಜನಿಕರು ಸಹಕಾರ ನೀಡಬೇಕಾಗಿದೆ. ಇಂತಹ ಕಾರ್ಯಕ್ರಮಗಳು ಪ್ರತಿಯೊಬ್ಬರಿಗೆ ಮುಟ್ಟುವಂತಾಗಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ ವಹಸಿದ್ದರು. ‌

IMG_0150
ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಮೀ ಸಿ.ಬಂಗೇರ, ತಾಲೂಕು ಪಂಚಾಯತ್ ಕಾರ್ಯನಿರ್ವಣಾಧಿಕಾರಿ ರಾಜಣ್ಣ, ಸಹಾಯಕ‌ಕಾರ್ಯಪಾಲ ಅಭಿಯಂತರ ಕೃಷ್ಣ ಕುಮಾರ್, ಉಡುಪಿ ಜಿಲ್ಲಾ ಅಂತರ್ಜಲ ಕಚೇರಿಯ ಹಿರಿಯ ಭೂ ವಿಜ್ಞಾನಿ ಡಾ! ಎಂ ದಿನಕರ ಶೆಟ್ಟಿ, ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ನೋಣಯ್ಯ ನಾಯಕ್ , ಮೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಎಂ.ರಾಮಚಂದ್ರ , ಸಂಪನ್ಮೂಲ ವ್ಯಕ್ತಿ ಪ್ರೋ. ಜಗದೀಶ್ ಬಾಳ, ಜಿಲ್ಲಾ ಅಂತರ್ಜಲ ಕಚೇರಿ ಯ ಹಿರಿಯ ಭೂವಿಜ್ಞಾನಿ ಜಾನಕಿ ಪಿ.
ಮತ್ತಿತರ ರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಅಂತರ್ಜಲ ಮಾಹಿತಿಯ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಲಾಯಿತು.ನಿತೇಶ್ ಡಿ.ಸೋಜ ಸ್ವಾಗತಿಸಿ, ಚಂದ್ರಿಕಾ ವಂದಿಸಿದರು.

By suddi9

Leave a Reply

Your email address will not be published. Required fields are marked *