ಬೆಂಗಳೂರು: ಯಲಹಂಕದ ವಾಯುನೆಲೆಯಲ್ಲಿ ನಡೆಯುತ್ತಿರುವ ಏರೋ ಇಂಡಿಯಾ ಶೋ ಪ್ರದರ್ಶನದ ವೇಳೆ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ.ಇಂದು ಮತ್ತು ನಾಳೆ ಸಾರ್ವಜನಿಕರಿಗೆ ವೈಮಾನಿಕ ಪ್ರದರ್ಶನ ನೋಡಲು ಅವಕಾಶ ಮಾಡಿಕೊಡಲಾಗಿತ್ತು. ಈ ಮಧ್ಯೆ ಸಾವಿರಾರು ವಾಹನಗಳನ್ನು ನಿಲುಗಡೆ ಮಾಡಲಾಗಿತ್ತು.
ಅವಘಡದಲ್ಲಿ 350ಕ್ಕೂ ಹೆಚ್ಚು ಕಾರುಗಳು ಅಗ್ನಿಗಾಹುತಿಯಾಗಿವೆ.ಬಳಿಕ ಅಗ್ನಿಶಾಮಕ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸಿದ್ದಾರೆ.ಭಾರೀ ಅಗ್ನಿ ಅನಾಹುತದಲ್ಲಿ ಕಾರು, ಬೈಕ್ ಗಳು ಬೆಂಕಿಗಾಹುತಿಯಾಗಿದ್ದು, \
ಯಾವುದೇ ಸಾವು, ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಳಗ್ಗೆಯ ಒಂದು ಹಂತದ ವೈಮಾನಿಕ ಪ್ರದರ್ಶನಕ್ಕೆ ತೆರೆ ಬಿದ್ದಿದೆ, ಮಧ್ಯಾಹ್ನದ ಪ್ರದರ್ಶನ 2 ಗಂಟೆಯ ಬಳಿಕ ಆರಂಭವಾಗಲಿದೆ.


