ವಿಟ್ಲ : ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಯನ್ನು ಧ್ಯೇಯವಾಗಿಸಿಕೊಂಡು ನಮ್ಮ ಸಂಸ್ಥೆ ಕಾರ್ಯೋನ್ಮುಖವಾಗಿದೆ. ವಿದ್ಯಾರ್ಥಿಗಳ ಸಾಧನೆಯಲ್ಲಿ ಶಿಕ್ಷಕರು ಮಾತ್ರವಲ್ಲದೆ ಪೋಷಕರೂ ಸಹ ಪಾಲುದಾರರು. ಈ ನಿಟ್ಟಿನಲ್ಲಿ ಸಂಸ್ಥೆ ಸದಾ ಹೆತ್ತವರ ಸಹಕಾರ ಸ್ಪಂದನವನ್ನು ನಿರೀಕ್ಷಿಸುತ್ತದೆ. ಎಂದು ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕ ಜೆ. ಪ್ರಹ್ಲಾದ್ ಶೆಟ್ಟಿ ಹೇಳಿದ್ದಾರೆ. ಅವರು ಶನಿವಾರ ಶಾಲೆಯಲ್ಲಿ ನಡೆದ ಹೆತ್ತವರ ಸಭೆಯಲ್ಲಿ ಮಾತನಾಡಿದರು.
ಆಡಳಿತಾಧಿಕಾರಿ ಸಿ. ಶ್ರೀಧರ್ ಮಾತನಾಡಿ ಮಕ್ಕಳ ಅಗತ್ಯತೆಗಳಿಗನುಗುಣವಾಗಿ ಶಾಲೆಯಲ್ಲಿ ಶೈಕ್ಷಣಿಕ ಹಾಗೂ ಭೌತಿಕ ಪರಿಸರದ ನಿರ್ಮಾಣ ವಿದ್ಯಾಸಂಸ್ಥೆಗಳ ಕರ್ತವ್ಯವಾಗಿದೆ. ಆ ನಿಟ್ಟಿನಲ್ಲಿ ನಮ್ಮ ಸಂಸ್ಥೆ ಅವಿರತವಾಗಿ ಶ್ರಮಿಸುತ್ತಿದ್ದು ಸಾಧನೆಯ ಶೃಂಗದೆಡೆಗೆ ಮುನ್ನಡೆಯುತ್ತಿದೆ ಎಂದರು.

IMG_2543
ಶಿಕ್ಷಕ –ರಕ್ಷಕ ಸಂಘದ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಅವರು ಮಾತನಾಡಿ ನಮ್ಮ ವಿದ್ಯಾಸಂಸ್ಥೆ ಹಂತಹಂತವಾಗಿ ಅಭಿವೃದ್ಧಿ ಸಾಧಿಸುತ್ತಿರುವುದು ಹೆಮ್ಮೆಯ ವಿಚಾರ. ಶಾಲಾ ಕಾರ್ಯಚಟುವಟಿಕೆಯಲ್ಲಿ ಹೆತ್ತವರೂ ಸಹ ಕೈ ಜೋಡಿಸಬೇಕು ಎಂದರು.
ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷೆ ಶ್ರೀಮತಿ ಲಕ್ಷ್ಮೀ ಮಾತನಾಡಿ ಮಕ್ಕಳು ಕಲಿತ ವಿಚಾರಗಳು ಕೇವಲ ಪರೀಕ್ಷೆಗೆ ಸೀಮಿತವಾಗಬಾರದು ಅದು ಅವರ ಮುಂದಿನ ಭವಿಷ್ಯಕ್ಕೆ ಪೂರಕವಾಗಿ ಸಹಕಾರಿಯಾಗಬೇಕು ಎಂದರು.
ಕಾರ್ಯಕಾರಿ ಸಮಿತಿಯ ಸದಸ್ಯರಾದ ಶ್ರೀ ಪಿ. ಎಸ್ ಮೋಹನ್ ಶಾಲೆಯು ಒಂದು ಕುಟುಂಬವಿದ್ದಂತೆ. ಆಡಳಿತಮಂಡಳಿ, ಶಿಕ್ಷಕ ವರ್ಗದವರೊಂದಿಗೆ ಉತ್ತಮ ಭಾಂದವ್ಯವನ್ನು ಬೆಳೆಸಿಕೊಂಡು ಮಕ್ಕಳ ಅಭಿವೃದ್ಧಿಗೆ ಕಾರಣಕರ್ತರಾಗೋಣ ಎಂದರು.
ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿಜಯಲಕ್ಷ್ಮೀ ವಿ.ಶೆಟ್ಟಿ , ಶಿಕ್ಷಕ ವರ್ಗದವರು ಹಾಗೂ ಪೋಷಕರು ಉಪಸ್ಥಿತರಿದ್ದರು. ಕಾರ್ಯಕಾರಿ ಸಮಿತಿ ಸದಸ್ಯೆ ಶ್ರೀಮತಿ ಶಿಫಾಲಿ ರೈ ಗತಸಭೆಯ ವರದಿ ಮಂಡಿಸಿದರು. ಶ್ರೀಮತಿ ಶಾಲಿನಿ ಲೆಕ್ಕ ಪತ್ರ ಮಂಡಿಸಿದರು. ಕಾರ್ಯಕಾರಿ ಸಮಿತಿ ಸದಸ್ಯೆ ಶ್ರೀಮತಿ ಕಸ್ತೂರಿ ಪಿ.ರೈ ಸ್ವಾಗತಿಸಿ, ಶಿಕ್ಷಕಿ ಆಶಾಲತಾ ವಂದಿಸಿದರು. ಶಿಕ್ಷಕಿ ಹರಿಣಾಕ್ಷಿ ಕಾರ್ಯಕ್ರಮ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *