ಸುದ್ದಿ9:ಮೂಡುಬಿದರೆ : ದ.ಕ ಜಿಲ್ಲಾ ಪಂಚಾಯಿತಿ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮೂಡುಬಿದರೆ ವಲಯ ಇವುಗಳ ವತಿಯಿಂದ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದಲ್ಲಿ ಎರಡು ದಿನಗಳ ಕಾಲ ನಡೆಯುವ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ದೆಗೆ ವಿದ್ಯಾಗಿರಿಯ ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಸೋಮವಾರ ಚಾಲನೆ ನೀಡಲಾಯಿತು.
ಯುವಜನಸೇವೆ ಸಚಿವ ಕೆ.ಅಭಯಚಂದ್ರ ಜೈನ್ ಅವರು ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಮಕ್ಕಳಲ್ಲಿರುವ ಪ್ರತಿಭೆ ಅನಾವರಣಗೊಳ್ಳಲು ಪ್ರತಿಭಾ ಕಾರಂಜಿ ಪೂರಕ. ಶಿಕ್ಷಣ, ಕ್ರೀಡೆಯ ಜತೆಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಮಕ್ಕಳನ್ನು ತೊಡಗಿಸಿಕೊಳ್ಳುವ ಮೂಲಕ ಅವರಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ರಾಜ್ಯ, ರಾಷ್ಟ್ರಮಟ್ಟದಲ್ಲಿ ಅರಳುವಂತೆ ಮಾಡಬೇಕಾಗಿದೆ ಎಂದು ಹೇಳಿದರು.
ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ ಪ್ರತಿಭಾ ಕಾರಂಜಿ ಸ್ಪರ್ದೆಯನ್ನು ಉದ್ಘಾಟಿಸಿ, ಮಕ್ಕಳು ತಮ್ಮಲ್ಲಿರುವ ಪ್ರತಿಭೆಗಳನ್ನು ಪ್ರದರ್ಶಿಸಲು ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ಸ್ಫೂರ್ತಿಯಾಗಿವೆ. ಹಿಂದೆ ಎಷ್ಟೋ ಮಕ್ಕಳು ಅವಕಾಶ ಸಿಗದೆ ವಂಚಿತರಾಗಿದ್ದಾರೆಂದು ಹೇಳಿದರು.
ಮೂಡುಬಿದಿರೆ ಪುರಸಭಾಧ್ಯಕ್ಷೆ ಸುಪ್ರಿಯಾ.ಡಿ.ಶೆಟ್ಟಿ, ತಾ.ಪಂ ಸದಸ್ಯ ಪ್ರಕಾಶ್.ಪಿ., ಆಳ್ವಾಸ್ ಸಂಸ್ಥೆಯ ಎಲ್.ಜೆ. ಫೆರ್ನಾಂಡಿಸ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಟಿ.ಎನ್.ಕೆಂಬಾರೆ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ನಾಗೇಶ್, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಪಶುಪತಿ ಶಾಸ್ತ್ರಿ, ಅನುದಾನಿತ ಶಿಕ್ಷಕರ ಸಂಘದ ಅಧ್ಯಕ್ಷ ಜಯರಾಮ್ ರಾವ್ ಮತ್ತು ಪ್ರತಿಭಾ ಕಾರಂಜಿಯ ನೋಡೆಲ್ ಅಧಿಕಾರಿ ಶಿವಾನಂದ ಕಾಯ್ಕಿಣಿ ಉಪಸ್ಥಿತರಿದ್ದರು.
ಕ್ಷೇತ್ರ ಶಿಕ್ಷಣಾಧಿಕಾರಿ ಗೋವಿಂದ ಮಡಿವಾಳ ಪ್ರಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಶಿಕ್ಷಕ ಮುನಿರಾಜ ರೆಂಜಾಳ ಕಾರ್ಯಕ್ರಮ ನಿರೂಪಿಸಿದರು. ಅಂಡಾರು ಗುಣಪಾಲ ಹೆಗ್ಡೆ ವಂದಿಸಿದರು.

 

 

5(a)

5(b)

By suddi9

Leave a Reply

Your email address will not be published. Required fields are marked *