ಪೊಳಲಿ: ಮಾ.13ರಂದು ನಡೆಯುವ ಬ್ರಹ್ಮಕಲಶಾಭಿಷೇಕಕ್ಕೆ ಸುಮಾರು 10 ಲಕ್ಷ ಮಂದಿ ಜನ ಸೇರುವ ನಿರೀಕ್ಷೆ ಇರುವುದರಿಂದ ಪೊಲೀಸ್ ಇಲಾಖೆ ಸಂಪೂರ್ಣ ಬಂದೋಬಸ್ತ್ ಕೈಗೊಂಡಿದ್ದು, ಯಾವುದೇ ತುರ್ತು ಸಂದರ್ಭ ಉಂಟಾದರೆ ಅದನ್ನು ನಿಭಾಯಿಸಲು ಅಗ್ನಿಶಾಮಕ ದಳ, ಆಂಬ್ಯುಲೆನ್ಸ್ ಸೇರಿದಂತೆ ವಾಹನಗಳನ್ನು ಸಜ್ಜುಗೊಳಿಸಲಾಗಿದೆ.

DSC_2539 ಪೊಳಲಿ-ಕೈಕಂಬ ರಸ್ತೆಯಲ್ಲಿ ವಾಹನ ದಟ್ಟನೆ ಉಂಟಾಗಿ ಟ್ರಾಫಿಕ್ ಜಾಂ ಉಂಟಾಗದಂತೆ ಆಯಕಟ್ಟಿನ ಪ್ರದೇಶಗಳಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಬಂಟ್ವಾಳ ಗ್ರಾಮಾಂತರ, ಬಜಪೆ ಠಾಣಾ ಪೊಲೀಸರು, ಗೃಹರಕ್ಷಕ ದಳ, ಟ್ರಾಫಿಕ್ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

DSC_2531ಅಗ್ನಿಶಾಮಕ ದಳದ ವಾಹನ, ಅಂಬ್ಯಲೆನ್ಸ್ ಅನ್ನು ಚೆಂಡಿನ ಗದ್ದೆಯಲ್ಲೇ ಸರ್ವಸನ್ನದ್ಧ ಸ್ಥಿತಿಯಲ್ಲಿ ನಿಯೋಜಿಸಲಾಗಿದೆ. ವೈದ್ಯಕೀಯ ತಂಡ, ಮೆಸ್ಕಾಂ ಸೇರಿ ನಾನಾ ಇಲಾಖೆಗಳು ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ಯಾವುದೇ ಅವಘಡ ಸಂಭವಿಸದಂತೆ ಸನ್ನದ್ಧ ಸ್ಥಿತಿಯಲ್ಲಿ ಇವೆ.

By suddi9

Leave a Reply

Your email address will not be published. Required fields are marked *