ರಾಜ್‍ನಾಥ್ ಸಿಂಗರ ಮೂರನೇ ಸರ್ಜಿಕಲ್ ಸ್ಟ್ರೈಕ್ ಹೇಳಿಕೆ ರಾಜಕೀಯ ಗಿಮಿಕ್!
ಪೊಳಲಿ: ಮಾಜಿ ಮುಖ್ಯಮಂತಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಪೊಳಲಿ ಶ್ರೀರಾಜರಾಜೇಶ್ವರಿ ದೇವಸ್ಥಾನಕ್ಕೆ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ತೆರಳಿದರು. ಈ ವೇಳೆ ದೇವಸ್ಥಾನದ ವಾಸ್ತುಶಿಲ್ಪವನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಪೊಳಲಿ ಅರ್ಚಕ ವೃಂದದವರು ಪ್ರಸಾದ ನೀಡಿದರು. ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ರಾಜೇಶ್ ನಾಯ್ಕ್ ಹಾಗು ಮೊಕ್ತೇಸರ ವೃಂದದವರು ಅವರನ್ನು ಆತ್ಮೀಯ ಬರಮಾಡಿಕೊಂಡು ದೇವಸ್ಥಾನಕ್ಕೆ ಕರೆದುಕೊಂಡು ಹೋದರು.

10vp sidharamayya-1
ಈ ವೇಳೆ ಮಾಧ್ಯಮದವರ ಜೊತೆ ಮಾತಾಡಿದ ಸಿದ್ದರಾಮಯ್ಯ, ಪೊಳಲಿ ದೇವಸ್ಥಾನಕ್ಕೆ ಪ್ರಾರ್ಥನೆ ಸಲ್ಲಿಸಲು ಆಗಮಿಸಿದ್ದೇನೆ ಎಂದರು. ರಾಜ್‍ನಾಥ್ ಸಿಂಗ್ ಅವರು ಮೂರನೇ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಮಂಗಳೂರಿನಲ್ಲಿ ಹೇಳಿಕೆ ನೀಡಿರುವ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ನಾನು ಇಂದು ಪೊಳಲಿಗೆ ಪ್ರಾರ್ಥನೆ ಸಲ್ಲಿಸಲು ಬಂದಿದ್ದೇನೆ.

10vp sidharamayuya-6ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಅವರು ನೀಡಿರುವ ಹೇಳಿಕೆ ಒಂದು ರಾಜಕೀಯ ಗಿಮಿಕ್ ಆಗಿರುವ ಸಾಧ್ಯತೆ ಇದೆ. ಈ ಬಗ್ಗೆ ಈಗ ನಾನೇನೂ ಹೇಳಲಾರೆ. ಹೇಳುವುದಾದರೆ ಮುಂದೆ ಪತ್ರಿಕಾಗೋಷ್ಠಿ ಕರೆದು ಹೇಳುತ್ತೇನೆ ಎಂದು ನುಡಿದರು.
ಸಚಿವರಾಗಿರುವ ಯು.ಟಿ. ಖಾದರ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಮಾಜಿ ಸಚಿವ ರಮಾನಾಥ ರೈ ಮುಂತಾದವರು ಉಪಸ್ಥಿತರಿದ್ದರು.

10vp sidharamayya-310vp sidharamayya-4

 

10vp sidharammaya-5 10vp sidharammaya-6

By Suddi9

Leave a Reply

Your email address will not be published. Required fields are marked *