ಪೊಳಲಿ: ಪೊಳಲಿ ಶ್ರೀ ರಾಜರಾಜೇಶ್ವರಿ ಅಮ್ಮನವರ ಬ್ರಹ್ಮಕಲಶೋತ್ಸವಕ್ಕೆ ಹಾಕಿದ ಬ್ಯಾನರ್, ಸ್ವಾಗತ ಕಮಾನು, ಬಂಟಿಂಗ್ಸ್‍ಗಳನ್ನು ಕೂಡಲೇ ತೆರವು ಮಾಡುವಂತೆ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಆಡಳಿತ ಮಂಡಳಿ ವಿನಂತಿ ಮಾಡಿದೆ.ದೇಶಾದ್ಯಂತ ಚುನಾವಣೆ ಘೋಷಣೆಯಾಗಿದ್ದು, ನೀತಿ ಸಂಹಿತೆ ಜಾರಿಯಾಗಿದೆ. ಆದರೆ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಎಲ್ಲ ವಿಧದಲ್ಲೂ ಸಹಕಾರ ನೀಡಿತ್ತು. ಇದೀಗ ಬ್ರಹ್ಮಕಲಶೋತ್ಸವದ ಎಲ್ಲ ಕಾರ್ಯಕ್ರಮಗಳು ಸುಸಾಂಗವಾಗಿ ನಡೆದಿದೆ. ಈ ಹಿನ್ನೆಲೆಯಲ್ಲಿ ಬ್ರಹ್ಮಕಲಶೋತ್ಸವಕ್ಕೆ ವೈಯಕ್ತಿಕ, ಸಂಘ-ಸಂಸ್ಥೆಗಳು ಹಾಕಿದ ಬ್ಯಾನರ್‍ಗಳು, ಸ್ವಾಗತ ಕಮಾನು, ಬಂಟಿಂಗ್ಸ್ ಸೇರಿದಂತೆ ಬ್ರಹ್ಮಕಲಶೋತ್ಸವ ಸಂದರ್ಭ ಹಾಕಲಾದ ಯಾವುದೇ ಅಲಂಕಾರಿಕ ಸೊತ್ತುಗಳಿದ್ದಲ್ಲಿ ಕೂಡಲೇ ತೆರವು ಮಾಡಿ ಸಹಕರಿಸಬೇಕೆಂದು ದೇವಳದ ಆಡಳಿತ ಮಂಡಳಿ ಸಾರ್ವಜನಿಕರಲ್ಲಿ ವಿನಂತಿ ಮಾಡಿದೆ.
