ವಿಟ್ಲ: ಬಸವನಗುಡಿ ವಿಟ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಗೆ ಜಿಸಿಐ ಇಂಡಿಯಾದ ರಾಷ್ಟ್ರೀಯ ಉಪಾಧ್ಯಕ್ಷ ಜೆಸಿಐ ಸೆನೆಟರ್ ಅನೀಶ್ ಸಿ ಬೇಟಿ ನೀಡಿದರು. ಈ ಸಂದರ್ಭದಲ್ಲಿ ವಿಟ್ಲ ಜೇಸಿಐ ಘಟಕದ ಅಧ್ಯಕ್ಷ ಬಾಲಕೃಷ್ಣ ವಿಟ್ಲ ಇವರು ಶಾಲೆಗೆ ಕೊಡುಗೆಯಾಗಿ ನೀಡಿದ ಸ್ಟೀಲ್ ಅಲ್ಮೇರಾ ಮತ್ತು ಗ್ರಂಥಾಲಯಕ್ಕೆ ಅಗತ್ಯವಾದ ಪುಸ್ಥಕಳನ್ನು ಹಸ್ತಾಂತರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ವಲಯಾಧ್ಯಕ್ಷ ಅಶೋಕ್ ಚೊಂತಾರು ಇತರ ವಲಯಾಧಿಕಾರಿಗಳು, ಜೆಸಿಐ ಸದಸ್ಯರು, ಶಾಲಾ ಆಡಳಿತ ಮಂಡಳಿಯವರು, ಪ್ರಾಂಶುಪಾಲ ಜಯರಾಮ ರೈ, ಶಿಕ್ಷಕರು, ಮಕ್ಕಳು ಉಪಸ್ಥಿತರಿದ್ದರು. ಶಾಲೆಯ ಅಧ್ಯಕ್ಷ ಎಲ್ ಎನ್ ಕೂಡೂರು ಸ್ವಾಗತಿಸಿದರು. ಕಾರ್ಯದರ್ಶಿ ಶ್ರೀಧರ್ ಕೊಡಕ್ಕಲ್ ವಂದಿಸಿದರು.
