ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾಗಿ 2019 ರಿಂದ 2022 ರ ವರೆಗೆ ಐಕಳ ಹರೀಶ್ ಶೆಟ್ಟಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಜಾಗತಿಕ ಬಂಟರ ಸಂಘಗಳ ಒಕ್ಕುಟದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಂಬೈ ಯ ಕುರ್ಲಾ ಪೂರ್ವದ ಬಂಟರ ಸಂಘದ ಎನೆಕ್ಸ್ ಸಂಕೀರ್ಣದ ಸಭಾಂಗಣದಲ್ಲಿ ಒಕ್ಕೂಟದ ಆಡಳಿತ ಪದಾಧಿಕಾರಿಗಳು ಮತ್ತು ವಿಶ್ವ ಬಂಟ ಬಂಧುಗಳ ಸಮ್ಮುಖದಲ್ಲಿ ಜರಗಿತು.

harish shetty-2

ಉಪಾದ್ಯಕ್ಷರಾಗಿ ಮುಂಬೈ ಬಂಟರ ಸಂಘದ ಮಾಜಿ ಅಧ್ಯಕ್ಷ , ಕರ್ನಿರೆ ಫೌಂಡೇಶನ್‍ನ ಅಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ , ಗೌರವ ಪ್ರಧಾನ ಕಾರ್ಯದರ್ಶಿಯಗಿ ಉಡುಪಿ ಬಂಟರ ಸಂಘದ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ, ಗೌರವ ಕೋಶಾಧಿಕಾರಿಯಾಗಿ ಮುಂಬೈ ಬಂಟರ ಸಂಘದ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಉಳ್ತೂರು ಮೋಹನ್ದಾಸ್ ಶಟ್ಟಿ ಹಾಗು ಜತೆ ಕಾರ್ಯದರ್ಶಿಯಾಗಿ ದಕ್ಷಿಣ ಕನ್ನಡ ಬಂಟರ ಯಾನೆ ನಾಡವರ ಮಾತೃ ಸಂಘದಕಾಸರಗೋಡಿನ ಕಾರ್ಯಕಾರಿ ಸಮಿತಿಯ ಸದಸ್ಯ ಸತೀಶ್ ಅಡಪ ಸಂಕಬೈಲ್ ಅವರನ್ನು ಆಯ್ಕೆ ಮಾಡಲಾಯಿತು

By suddi9

Leave a Reply

Your email address will not be published. Required fields are marked *