ಬಂಟ್ವಾಳ : ತಾಲೂಕು ಕಾನೂನು ಸೇವೆಗಳ ಸಮಿತಿ , ವಕೀಲರ ಸಂಘ, ಸಾರ್ವಜನಿಕ ಶಿಕ್ಷಣ ಇಲಾಖೆ, ತಾ.ಪಂ. ಮತ್ತು ಕಂದಾಯ ಇಲಾಖೆ ಹಾಗೂ ಇತರ ಸರಕಾರಿ ಇಲಾಖೆಗಳ ಸಹಯೋಗದೊಂದಿಗೆ ಪುದು ಗ್ರಾ.ಪಂ. ನಲ್ಲಿ ಜರಗಿದ ಕಾನೂನು ಸಾಕ್ಷರಥಾ ಮತ್ತು ಸಂಚಾರಿ ನ್ಯಾಯಾಲಯದ ಕಾನೂನು ಮಾಹಿತಿ ಶಿಬಿರವನ್ನು ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಮತ್ತು ತಾಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ ಪ್ರತಿಭಾ ಡಿ.ಎಸ್ ವಿವಿಪ್ಯಾಟ್ ಮತಯಂತ್ರ ಒತ್ತುವ ಮೂಲಕ ಉದ್ಘಾಟಿಸಿದರು.

KAR_9461

 

KAR_9466

 

ವಕೀಲರ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಜೈನ್ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿ ನ್ಯಾಯವಾದಿ ಶ್ರೀಧರ ಪೈ ಮತದಾನದ ಅರಿವು ಮತ್ತು ಸಂವಿಧಾನಿಕ ಕರ್ತವ್ಯಗಳ ಬಗ್ಗೆ ಮಾಹಿತಿ ನೀಡಿದರು. ಸಣ್ಣ ನೀರಾವರಿ ಇಂಜಿನಿಯರ್ ಶಿವಪ್ರಸನ್ನ ವಿವಿಪ್ಯಾಟ್ ಮತಯಂತ್ರ ಮತ್ತು ಮತದಾನ ಮಾಡುವ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ತಾ.ಪಂ.ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ತಾ.ಪಂ.ಸಹಾಯಕ ನಿರ್ದೇಶಕ ಪ್ರಶಾಂತ್, ವಕೀಲರ ಸಂಘದ ಉಪಾಧ್ಯಕ್ಷ ಚಂದ್ರಶೇಖರ ರಾವ್ ಪುಂಚಮೆ, ನ್ಯಾಯವಾದಿಗಳಾದ ಎ.ಕೆ.ರಾವ್, ಆಶಾಮಣಿ, ಗಣೇಶ್ ಪೈ , ಸತೀಶ್ ಬಿ. ಮತ್ತಿತರರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *