ಬಂಟ್ವಾಳ : ತಾಲೂಕು ಕಾನೂನು ಸೇವೆಗಳ ಸಮಿತಿ , ವಕೀಲರ ಸಂಘ, ಸಾರ್ವಜನಿಕ ಶಿಕ್ಷಣ ಇಲಾಖೆ, ತಾ.ಪಂ. ಮತ್ತು ಕಂದಾಯ ಇಲಾಖೆ ಹಾಗೂ ಇತರ ಸರಕಾರಿ ಇಲಾಖೆಗಳ ಸಹಯೋಗದೊಂದಿಗೆ ಸರಕಾರಿ ಪ್ರೌಢಶಾಲೆ ನಂದಾವರದಲ್ಲಿ ಜರಗಿದ ಕಾನೂನು ಸಾಕ್ಷರಥಾ ಮತ್ತು ಸಂಚಾರಿ ನ್ಯಾಯಾಲಯದ ಕಾನೂನು ಮಾಹಿತಿ ಶಿಬಿರವನ್ನು ಹಿರಿಯ ಸಿವಿಲ್ ನ್ಯಾಯಾಧೀ ಶ ಮತ್ತು ತಾ.ಕಾ.ಸೇ.ಸಮಿತಿ ಅಧ್ಯಕ್ಷ ಮಹಮ್ಮದ್ ಇಮ್ತಿಯಾಝ್ ಅಹಮ್ಮದ್ ಉದ್ಘಾಟಿಸಿದರು. ವಕೀಲರ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಜೈನ್ ಅಧ್ಯಕ್ಷತೆ ವಹಿಸಿದ್ದರು.

KAR_9491

ಸಂಪನ್ಮೂಲ ವ್ಯಕ್ತಿ ಮುಖ್ಯೋಪಾಧ್ಯಾಯ ದೇವದಾಸ್ ಮಕ್ಕಳ ನಡೆ ಶಾಲೆ ಕಡೆ ಮತ್ತು ಸರಕಾರದ ಸೌಲಭ್ಯ ಗಳ ಕುರಿತು ಮಾಹಿತಿ ನೀಡಿದರು. ಶೈಲಜಾ ರಾಜೇಶ್ ಮಕ್ಕಳ ಹಕ್ಕುಗಳ ರಕ್ಷಣೆ ಬಗ್ಗೆ ಮಾಹಿತಿ ನೀಡಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಡಾ ಎಸ್.ಎಂ.ಗೋಪಾಲ್ ಕೃಷ್ಣ ಆಚಾರ್ , ಸಹಾಯಕ ಸರಕಾರಿ ವಕೀಲರಾದ ಸತೀಶ್ ಕುಮಾರ್ ಶಿವಗಿರಿ, ನ್ಯಾಯವಾದಿಗಳಾದ ಜಯರಾಮ್ ರೈ, ಸುರೇಶ್ ಕುಮಾರ್ ನಾವೂರು, ಆಶಾಮನಿ, ಗಣೇಶ್ ಪೈ, ಸತೀಶ್ ಬಿ., ಶಿಕ್ಷಕ ಉದಯಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

 

By suddi9

Leave a Reply

Your email address will not be published. Required fields are marked *